ಅರಿವಳಿಕೆ ಪ್ರಯೋಗ ಮಾಡಿದರೂ ತಪ್ಪಿಸಿಕೊಂಡ ಹುಲಿರಾಯ
ಸಿದ್ದಾಪುರ: ವಿರಾಜಪೇಟೆಯ ಸಿದ್ದಾಪುರದಲ್ಲಿ ಜಾನುವಾರು ಭಕ್ಷಕ ಹುಲಿ ಇಂದು ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಅರಿವಳಿಕೆ ಇಂಜೆಕ್ಷನ್ ಚುಚ್ಚಿಸಿಕೊಂಡರೂ ಓಡಿ ಮತ್ತೆ ಕಾಡು ಸೇರಿದೆ.
ಈ ಭಾಗದಲ್ಲಿ ಈಗಾಗಲೇ ನಾಲ್ಕು ಹಸುಗಳನ್ನು ಬಲಿ ಪಡೆದಿರುವ ಹುಲಿಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ನಾಲ್ಕೈದು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶುಕ್ರವಾರ ಹುಲಿ ಬಾಡಗ ಬಾಣಂಗಾಲ ಗ್ರಾಮದ ಘಟ್ಟಗಳ ಸಮೀಪ ಹುಲಿಯು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖಾಧಿಕಾರಿಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು. ನಾಲ್ಕು ಸಾಕಾನೆಗಳ ನೆರವಿನಿಂದ ಅರಣ್ಯ ಸಿಬ್ಬಂದಿಗಳು ಸೇರಿ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಹುಲಿಯು ಪತ್ತೆಯಾಯಿತು. ಕೂಡಲೇ ವನ್ಯ ಜೀವಿ ವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಹಾಗೂ ಶೂಟರ್ ಕನ್ನಂಡ ರಂಜನ್ ಸೇರಿ ಹುಲಿ ಮೇಲೆ ಅರಿವಳಿಕೆ ಚುಚ್ಚುಮದ್ದನ್ನು ಪ್ರಯೋಗಿಸಿದರು. ಆದರೆ ಚುಚ್ಚು ಮದ್ದಿನ ಪ್ರಭಾವಕ್ಕೆ ಒಳಗಾಗಿ ಪ್ರಜ್ಞೆ ತಪ್ಪಿ ಬೀಳದೆ ಹುಲಿಯು ತಪ್ಪಿಸಿಕೊಂಡು ಮುಖ್ಯ ರಸ್ತೆಯ ಮೂಲಕ ಸಾಗಿ ಸಮೀಪದ ಮಾಲ್ದಾರೆ ವ್ಯಾಪ್ತಿಯ ಅರಣ್ಯ ಪ್ರದೇಶ ಸೇರಿಕೊಂಡಿದೆ.
ಕಳೆದ ನಾಲ್ಕು ದಿನಗಳಿಂದ ಕಾರ್ಯಾಚರಣೆ ತಂಡವು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಹಾಗೂ ಮೊಳಗುಮನೆ ಸೇರಿದಂತೆ ಸುತ್ತಮುತ್ತಲಿನ ಕಾಫಿ ತೋಟದೊಳಗೆ ಅರಣ್ಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಆರ್.ಆರ್.ಟಿ ತಂಡದ ಸಿಬ್ಬಂದಿಗಳು ಸೇರಿ ಹಗಲಿರುಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ ಘಟ್ಟದಳ ಸರ್ಕಾರಿ ತಮಿಳು ಶಾಲೆಯ ಸಮೀಪದಲ್ಲಿ ಬುಧವಾರ ಹುಲಿಯು ಹಾಡಹಗಲೇ ಸಾರ್ವಜನಿಕರ ಎದುರು ಕಾಣಿಸಿಕೊಂಡು ಹಸುವೊಂದನ್ನು ಸಾಯಿಸಿತ್ತು. ಇದರಿಂದಾಗಿ ಗ್ರಾಮಸ್ಥರು ಇನ್ನಷ್ಟು ಭಯಭೀತರಾಗಿದ್ದರು.
ಹುಲಿಯನ್ನು ಪತ್ತೆ ಹಚ್ಚುವಲ್ಲಿ ಕಾರ್ಯಾಚರಣೆ ತಂಡ ಯಶಸ್ವಿಯಾದರೂ ಕೂಡ ಹುಲಿ ಸೆರೆಯಾಗದಿರುವುದು ಸಮಸ್ಯೆಯಾಗಿದೆ. ಆದರೂ ಕೂಡ ಛಲ ಬಿಡದ ಕಾರ್ಯಾಚರಣೆ ತಂಡವು ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಅರಣ್ಯ ಇಲಾಖಾ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಆರ್.ಆರ್.ಟಿ ತಂಡದ ಸಿಬ್ಬಂದಿಗಳು ಸೇರಿ ಕಾರ್ಯಾಚರಣೆಯಲ್ಲಿ 50ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದಾರೆ. ವೀರಾಜಪೇಟೆ ತಾಲೂಕು ಡಿ.ಸಿ.ಎಫ್ ಶಿವರಾಂ ಬಾಬು, ಎ.ಸಿ.ಎಫ್ ನೆಹರೂ ಹಾಗೂ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್ ಹುನಗುಂದ, ಸಿದ್ದಾಪುರ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಇನ್ನಿತರರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…