ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿರುವ ಹುಲಿ ಮತ್ತೊಂದು ಬಲಿ ಪಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವಾಗಲೇ ಹುಲಿ ಹಸುವೊಂದನ್ನು ಹೊತ್ತೊಯ್ದಿದೆ.
ಸಿದ್ದಾಪುರ ವ್ಯಾಪ್ತಿಯಲ್ಲಿ ಹುಲಿ ದಾಳಿ ಹೆಚ್ಚುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ೪ ಸಾಕಾನೆಗಳ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹುಲಿ ಚಲನವಲನ ಕಂಡುಬಂದ ಸ್ಥಳದಲ್ಲಿ ಬೋನ್ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಿ ಹುಲಿ ಸೆರೆಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಆದರೆ, ಹುಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾರ್ಯಾಚರಣೆ ನಡೆಸುತ್ತಿರುವ ಪ್ರದೇಶದಲ್ಲೇ ಸುತ್ತಾಡುತ್ತಿದ್ದು, ಬುಧವಾರ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲೇ ಗ್ರಾಮದ ಜಯಚಂದ್ರ ಎಂಬವರಿಗೆ ಸೇರಿದ ಮತ್ತೊಂದು ಹಸುವನ್ನು ಹುಲಿ ಬಲಿ ಪಡೆದಿದೆ.
3-4 ದಿನಗಳ ಅವಧಿಯಲ್ಲೇ ೩ ಹಸುಗಳನ್ನು ಹುಲಿ ಕೊಂದಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು, ಕೂಡಲೇ ಹುಲಿ ಸೆರೆಹಿಡಿಯುವಂತೆ ಪಟ್ಟುಹಿಡಿದಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…