ಕುಶಾಲನಗರ (ಕೊಡಗು) : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ನೆನ್ನೆ ದಿನ ಕೊಡಗು ಜಿಲ್ಲೆಗೆ ತೆರಳಿದ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚ ಕೆಲ ಕಾರ್ಯಕರ್ತರು ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಕುಶಾಲನಗರ ತಾಲೂಕಿನ ಗುಡ್ಡೆ ಹೊಸೂರಿನಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು 9 ಆರೋಪಿಗಳನ್ನು ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಮನವಿ ಮಾಡಿದ್ದಾರೆ.