ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಮಿಣ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳು ಬಂದಿರಲಿಲ್ಲ ಇಂದು ಈ ಭಾಗದ ಪ್ರಮುಖ ಮುಖಂಡರಾದ ಯರಂಬಾಡಿ ಹುಚ್ಚಯ್ಯ ಹಾಗೂ ಪ್ರಮುಖ ನಾಯಕರುಗಳು ಜಾದಳ ಸೇರ್ಪಡೆಯಾಗಿರುವುದು ಈ ಭಾಗದಲ್ಲಿ ನಮಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಾರಿ ಹನೂರು ಕ್ಷೇತ್ರದಲ್ಲಿ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ನಿಜವೋ ಹಾಗೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಜಾದಳ ಜಯಭೇರಿ ಬಾರಿಸುವುದು ನೂರಕ್ಕೆ ನೂರು ಸತ್ಯ. ಈ ಭಾಗದ ಜನರು ನನ್ನ ಸಂಘಟನೆ ಹಾಗೂ ಕಷ್ಟ ಸುಖಗಳಲ್ಲಿ ಸ್ಪಂದಿಸುತ್ತಿರುವುದಕ್ಕೆ ಮತದಾರರು ಈ ಬಾರಿ ನನ್ನ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷ ಗಾಜನೂರು ಮಾದೇವ, ಬೋಪ್ಪನ್ ಮಾದೇವ, ವಡ್ಡರಸಿ ಸೇರಿದಂತೆ ಮುಂತಾದವರು ಕಾಂಗ್ರೆಸ್ ತೊರೆದು ಜಾದಳ ಸೇರ್ಪಡೆಯಾದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…