ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಸಂಬಂಧವಾಗಿ ಇಂದು ಮೈಸೂರಿನ ವರುಣ ಕ್ಷೇತ್ರದ ಮೈಸೂರು ಸುತ್ತೂರು ಮುಖ್ಯ ರಸ್ತೆಯ ಮರಡಿ ಹುಂಡಿ ಗೆಟ್ ಬಳಿ ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಸಿದ್ದರಾಮಯ್ಯ ಸಾಹೇಬರ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಸಾವಿರಾರು ಜನರ ಸಮ್ಮುಖದಲ್ಲಿ ರಸ್ತೆ ತಡೆ ನಡೆಸಲಾಯಿತು, ಆನಂತರ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಈ ರಸ್ತೆ ತಡೆ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಹಿನಕಲ್ ಉದಯ್,ಜೆ ಮಹಾದೇವು, ಬುಲೆಟ್ ಮಹಾದೇವು, ಮರಡಿ ಹುಂಡಿ ಪುಟ್ಟಸ್ವಾಮಿ, ಬಾಲರಾಜ್,ಸಂತ್ತೋಷ ಕಿರಾಳು.ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಜಗದೀಶ್, ಪ್ರದೀಪ್, ಮರಡಿ ಹುಂಡಿ ಗ್ರಾಮದ ದೇವರಾಜು (ಜವರ) ರಾಮ, ರಘು, ರವಿ ಮಹೇಶ್,ತುಂನೇರಳೆ ಮಹೇಶ್, ರವಿ,ನಂದಿಗುಂದ ಮಹೇಶ್,ಸಪ್ಪಣ್ಣ, ಮಂಜು, ರಾಯನ ಹುಂಡಿ ಡಿ ಸಿ ಸಿ ಪಾಪಣ್ಣ, ಶೆಟ್ಟಿಹಳ್ಳಿ ಶಿವರಾಜ್, ಇನ್ನೂ ನೂರಾರು ಮುಖಂಡರು ಭಾಗವಹಿಸಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…