Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ : ಸಿಎಂ ಬೊಮ್ಮಾಯಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಖಚಿತ ಎನ್ನುವುದು ಅರಿವಾಗಿರುವುದರಿಂದಲೇ ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಅತನಾಡಿದ ಅವರು, ‘ನಾವು ಸುಮ್ಮನೇ ಕುಳಿತರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ’ ಎಂಬ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ಮನೆಗೆ ಹೋಗುವ ಕಾರ್ಯಕ್ರಮ ಇದೆ. ಹೀಗಾಗಿಯೇ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಚಾಯಿಸಿದರು.
ಗುಜರಾತ್ ಚುನಾವಣೆಯ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲ ತಯಾರಿಯನ್ನೂ ನಡೆಸುತ್ತಿದ್ದೇವೆ.
ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲ ತಯಾರಿ ನಡೆಸಿದ್ದೇವೆ ಎಂದು ತಿಳಿಸಿದರು.
ಅವಧಿಗೂ ಮುನ್ನವೇ ಚುನಾವಣೆ ಬರಲಿದೆೆಯೇ’ ಎಂಬ ಪ್ರಶ್ನೆಗೆ, ‘ಇಂಥವೆಲ್ಲ ನಿಮಗೆ ಯಾರು ಹೇಳುತಾರ್ರೀ’ ಎಂದು ಗರಂ ಆಗಿ ಕಾರಿನತ್ತ ತೆರಳಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಹಾಜರಿದ್ದರು.
ಇದಕ್ಕೂ ಮುನ್ನ ಜಿಲ್ಲಾಡಳಿತದ ಪರವಾಗಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲಾಯಿತು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಮೈಲ್ಯಾಕ್ ಅಧ್ಯಕ್ಷ ಆರ್.ರಘು, ಉಪ ಮಹಾಪೌರರಾದ ಡಾ.ಜಿ.ರೂಪಾ, ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಪ್ರದೀಪ್ ಗುಂಟಿ, ಎಂ.ಎಸ್.ಗೀತಾ ಪ್ರಸನ್ನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಮೈಸೂರು ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಮಾಜಿ ಮಹಾಪೌರ ಎಸ್.ಸತೀಶ್ ಸ್ವಾಮಿ ಮೊದಲಾದವರು ಸ್ವಾಗತಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ