ಜಿಲ್ಲೆಗಳು

ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ : ಸಿಎಂ ಬೊಮ್ಮಾಯಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಖಚಿತ ಎನ್ನುವುದು ಅರಿವಾಗಿರುವುದರಿಂದಲೇ ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಅತನಾಡಿದ ಅವರು, ‘ನಾವು ಸುಮ್ಮನೇ ಕುಳಿತರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ’ ಎಂಬ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ಮನೆಗೆ ಹೋಗುವ ಕಾರ್ಯಕ್ರಮ ಇದೆ. ಹೀಗಾಗಿಯೇ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಚಾಯಿಸಿದರು.
ಗುಜರಾತ್ ಚುನಾವಣೆಯ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲ ತಯಾರಿಯನ್ನೂ ನಡೆಸುತ್ತಿದ್ದೇವೆ.
ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲ ತಯಾರಿ ನಡೆಸಿದ್ದೇವೆ ಎಂದು ತಿಳಿಸಿದರು.
ಅವಧಿಗೂ ಮುನ್ನವೇ ಚುನಾವಣೆ ಬರಲಿದೆೆಯೇ’ ಎಂಬ ಪ್ರಶ್ನೆಗೆ, ‘ಇಂಥವೆಲ್ಲ ನಿಮಗೆ ಯಾರು ಹೇಳುತಾರ್ರೀ’ ಎಂದು ಗರಂ ಆಗಿ ಕಾರಿನತ್ತ ತೆರಳಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಹಾಜರಿದ್ದರು.
ಇದಕ್ಕೂ ಮುನ್ನ ಜಿಲ್ಲಾಡಳಿತದ ಪರವಾಗಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲಾಯಿತು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಮೈಲ್ಯಾಕ್ ಅಧ್ಯಕ್ಷ ಆರ್.ರಘು, ಉಪ ಮಹಾಪೌರರಾದ ಡಾ.ಜಿ.ರೂಪಾ, ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಪ್ರದೀಪ್ ಗುಂಟಿ, ಎಂ.ಎಸ್.ಗೀತಾ ಪ್ರಸನ್ನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಮೈಸೂರು ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಮಾಜಿ ಮಹಾಪೌರ ಎಸ್.ಸತೀಶ್ ಸ್ವಾಮಿ ಮೊದಲಾದವರು ಸ್ವಾಗತಿಸಿದರು.

andolanait

Recent Posts

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

13 mins ago

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

33 mins ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

40 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…

53 mins ago

ನಿಮ್ಮ ಕೆಲಸ ಎಷ್ಟಿದೆ ಅದನ್ನು ನೋಡಿಕೊಳ್ಳಿ: ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌…

1 hour ago

ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಲೋಪ: ಬಂಗಾಳ ಸರ್ಕಾರದಿಂದ ವರದಿ ಕೇಳಿದ ಗೃಹ ಕಾರ್ಯದರ್ಶಿ

ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್‌ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…

1 hour ago