ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಕೈಗೊಂಡಿದ್ದು. ಈ ಸಂಬಂಧ ಇಂದು ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.
ಸಿದ್ದರಾಮಯ್ಯ ಅವರು ಜಿಲ್ಲೆಯ ಪೊನ್ನಂಪೇಟೆಗೆ ಭೇಟಿ ನೀಡಲಿದ್ದು,ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ತದನಂತರ ದೇವರಕೋಲ್ಲಿ ರಾಜ್ಯ ಹೆದ್ದಾರಿ, ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಿಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್‌ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…
ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಮಲ್ ಹಾಸನ್…
ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…