ಜಿಲ್ಲೆಗಳು

ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಕೈಗೊಂಡಿದ್ದು. ಈ ಸಂಬಂಧ ಇಂದು ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.‌

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.

ಸಿದ್ದರಾಮಯ್ಯ ಅವರು ಜಿಲ್ಲೆಯ ಪೊನ್ನಂಪೇಟೆಗೆ ಭೇಟಿ ನೀಡಲಿದ್ದು,ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ತದನಂತರ ದೇವರಕೋಲ್ಲಿ ರಾಜ್ಯ ಹೆದ್ದಾರಿ, ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಿಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

andolanait

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

4 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

4 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

4 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago