ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ.
79 ಗ್ರಾಮಗಳ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಜಾನುವಾರುಗಳಿಗೆ ಈ ಯೋಜನೆಯಿಂದ ಭಾರೀ ಅನುಕೂಲವಾಗಲಿದೆ. ಇನ್ನು ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಪಿರಿಯಾಪಟ್ಟಣ ತಾಲೂಕಿನ 150 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ 2017ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ. ಮಂಜೂರು ಮಾಡಿದ್ದು ಕೂಡ ನಮ್ಮ ಸರ್ಕಾರವೇ ಹೊರತು ಇದು ಬಿಜೆಪಿಯ ಕೊಡುಗೆಯಲ್ಲ, ಯೋಜನೆ ಮಂಜೂರಾಗಲು ಶಾಸಕರಾಗಿದ್ದ ಕೆ. ವೆಂಕಟೇಶ್ ಕಾರಣ ಎಂದು ಹೇಳಿಕೆ ನೀಡಿದರು.
ಕುಡಿಯುವ ನೀರು ಒದಗಿಸಲು ಹಾಗೂ ಅಂತರ್ಜಲ ಪ್ರಮಾಣವನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಇದರಿಂದ 79 ಹಳ್ಳಿಗಳ 93000 ಜನರಿಗೆ ಅನುಕೂಲವಾಗಲಿದೆ. ನೀರಾವರಿಗೆ ಪ್ರತಿ ವರ್ಷ 10 ಸಾವಿರ ಕೋಟಿ ಖರ್ಚು ಮಾಡುತ್ತೇವೆ ಎಂದು ಹೇಳಿದ್ದೆವು, 56 ಸಾವಿರ ಕೋಟಿ ಖರ್ಚು ಮಾಡಿದೆವು. ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿಯವರು ಒಂದು ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ ಎಂದು ಹೇಳಿ ಮಾಡಲಿಲ್ಲ ಎಂದೂ ಸಹ ಸಿದ್ದರಾಮಯ್ಯ ಹೇಳಿದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…