ಜಿಲ್ಲೆಗಳು

ಮೈಸೂರು: 150 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿದ್ದರಾಮಯ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ.

79 ಗ್ರಾಮಗಳ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಜಾನುವಾರುಗಳಿಗೆ ಈ ಯೋಜನೆಯಿಂದ ಭಾರೀ ಅನುಕೂಲವಾಗಲಿದೆ. ಇನ್ನು ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಪಿರಿಯಾಪಟ್ಟಣ ತಾಲೂಕಿನ 150 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ 2017ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ. ಮಂಜೂರು ಮಾಡಿದ್ದು ಕೂಡ ನಮ್ಮ ಸರ್ಕಾರವೇ ಹೊರತು ಇದು ಬಿಜೆಪಿಯ ಕೊಡುಗೆಯಲ್ಲ, ಯೋಜನೆ ಮಂಜೂರಾಗಲು ಶಾಸಕರಾಗಿದ್ದ ಕೆ. ವೆಂಕಟೇಶ್‌ ಕಾರಣ ಎಂದು ಹೇಳಿಕೆ ನೀಡಿದರು.

ಕುಡಿಯುವ ನೀರು ಒದಗಿಸಲು ಹಾಗೂ ಅಂತರ್ಜಲ ಪ್ರಮಾಣವನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಇದರಿಂದ 79 ಹಳ್ಳಿಗಳ 93000 ಜನರಿಗೆ ಅನುಕೂಲವಾಗಲಿದೆ. ನೀರಾವರಿಗೆ ಪ್ರತಿ ವರ್ಷ 10 ಸಾವಿರ ಕೋಟಿ ಖರ್ಚು ಮಾಡುತ್ತೇವೆ ಎಂದು ಹೇಳಿದ್ದೆವು, 56 ಸಾವಿರ ಕೋಟಿ ಖರ್ಚು ಮಾಡಿದೆವು. ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿಯವರು ಒಂದು ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ ಎಂದು ಹೇಳಿ ಮಾಡಲಿಲ್ಲ ಎಂದೂ ಸಹ ಸಿದ್ದರಾಮಯ್ಯ ಹೇಳಿದರು.

andolana

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago