Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡಿನೀಯ : ಎಂ. ಆರ್. ಮಂಜುನಾಥ್

ಹನೂರು:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡನೀಯ ಎಂದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಅಪಾರ ಪ್ರಮಾಣದ ಆಸ್ತಿ,ಬೆಳೆ ಹಾನಿಯಾಗಿದ್ದ ಹಿನ್ನೆಲೆ ಇದರ ಸಂಕ್ಷಿಪ್ತ ಮಾಹಿತಿ ತಿಳಿದುಕೊಳ್ಳಲು ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಅವಾಂತರ ಸೃಷ್ಟಿಸಲಾಗಿದೆ. ಅವರು ರಾಜ್ಯದ ಧೀಮಂತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಾರೇ ಆದರೂ ಸಹ ದ್ವೇಷದ ರಾಜಕಾರಣವನ್ನು ಎಂದಿಗೂ ಮಾಡಬಾರದು. ಈಗಾಗಲೇ ಪಕ್ಷದ ವರಿಷ್ಠರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ವಿಚಾರವಾಗಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ, ರಾಜ್ಯದಲ್ಲಿ ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತ ವೈಖರಿಯಿಂದ ಬೇಸತ್ತು ಪ್ರಾದೇಶಿಕ ಪಕ್ಷದತ್ತ ಒಲವು ತೋರಿದ್ದಾರೆ . ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಪ್ರತಿಯೊಬ್ಬರು ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ತಿಳಿಸಿದರು.

ಹಿರಿಯ ಮುಖಂಡ ರಾಜಶೇಖರ್ ಮೂರ್ತಿ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತಿವೆ. ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿಯಲು ದೋಸ್ತಿ ಮಾಡಿಕೊಂಡ ಇವರು, ಕೊಡಗಿನ ವಿಚಾರದಲ್ಲಿ ಬಿಜೆಪಿಯನ್ನು ಖಂಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು? ಈ ಈಗಾಗಲೇ ಹನೂರು ಕ್ಷೇತ್ರದಲ್ಲಿ 2 ಕುಟುಂಬದ ಆಡಳಿತವನ್ನು ವೈಖರಿಗೆ ಜನ ಬೇಸತ್ತಿದ್ದಾರೆ. ಕ್ಷೇತ್ರದಾದ್ಯಂತ ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ಸಂಘಟನೆಯನ್ನು ಮೆಚ್ಚಿ ಇತರೆ ಪಕ್ಷದ ಕಾರ್ಯಕರ್ತರುಗಳು ಜೆಡಿಎಸ್ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ.ಮುಂದಿನ ಚುನಾವಣೆಯಲ್ಲಿ ಮಂಜುನಾಥರವರು ಶಾಸಕರಾಗುವುದು ನಿಶ್ಚಿತ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಸದಸ್ಯರಾದ ಆನಂದ್, ಮಹೇಶ್ ನಾಯ್ಕ, ಮುಮ್ತಾಜ್ ಬಾನು ಜೆಡಿಎಸ್ ಮುಖಂಡರಾದ ಮಂಜೇಶ್,ಪ್ರಸನ್ನ, ಗೋವಿಂದ, ನವೀನ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ