ಜಿಲ್ಲೆಗಳು

ಸಿದ್ದರಾಮಯ್ಯ ಕೊಡಗಿನ ಜನರ ಕಷ್ಟ ಕೇಳಿದ್ದರೆ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ : ಎಸ್.ಟಿ ಸೋಮಶೇಖರ್.

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್  ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ ಬೇರೆ, ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ  ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗಿನ ಪ್ರವಾಹದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಜನರ ಕಷ್ಟ ಕೇಳಿದ್ದರೆ ಜನ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ.  ಕೊಡಗಿನ‌ ಜನ ಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು. ಕಷ್ಟ ಕಾಲದಲ್ಲಿ ನಮ್ಮ ಬಳಿಗೆ ಬರಲಿಲ್ಲ.ಈಗ ಬಂದಿದ್ದಾರೆ  ಎಂದು ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ ಎಂದು ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಅವರಿಗೆ ಅವರದೇ ಆದ ಸ್ಥಾನಕ್ಕೆ ಗೌರವ ತೂಕವಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಮಾತನಾಡುವ ಮಾತುಗಳಲ್ಲಿ ಬಹಳ ತೂಕವಿರುತ್ತಿತ್ತು ಆದರೆ  ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಬರೀ ವಿವಾದಗಳ ಮಾತುಗಳನ್ನೇ ಮಾತನಾಡುತ್ತಿದ್ದಾರೆ. ಎಂದರು.

ಮುಂದುವರಿದು, ಹತ್ಯೆ ಮಾಡುವಂತಹ ವಾತಾವರಣ ನಮ್ಮ ಕರ್ನಾಟಕದಲ್ಲಿ ಇಲ್ಲ,  ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ಬಲಯುತವಾಗಿದೆ. ಯಾರೂ ಅಭದ್ರತೆ ಬಗ್ಗೆ ಚಿಂತೆ ಮಾಡುವುದು ಬೇಡ ಎಂದರು.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

2 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

2 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

2 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

2 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

2 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

2 hours ago