ಜಿಲ್ಲೆಗಳು

ವರಿಷ್ಠರು ಸೂಚಿಸಿದರೆ ವರುಣದಲ್ಲೇ ಸ್ಪರ್ಧೆ: ಸಿದ್ದು

ಇಂಡವಾಳು ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿದ ವಿಪಕ್ಷ ನಾಯಕ

ತಿ.ನರಸೀಪುರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಕ್ಷೇತ್ರದ ಜನರು ಒತ್ತಾಯ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರುತ್ತೇನೆ. ವರಿಷ್ಠರು ಸೂಚಿಸಿದರೆ ವರುಣದಲ್ಲಿಯೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ತಾಲ್ಲೂಕಿನ ವರುಣ ವಿಧಾನಸಭಾ ಇಂಡವಾಳು ಗ್ರಾಮದಲ್ಲಿ ಶುಕ್ರವಾರ ಸಂಜೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು ನನ್ನ ಸ್ಪರ್ಧೆಯ ಕ್ಷೇತ್ರದ ಆಯ್ಕೆಯನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇನೆ. ಕ್ಷೇತ್ರದ ಮತದಾರರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ಪುನರುಚ್ಚರಿಸಿದರು.
ದೇಶದಲ್ಲೇ ಪ್ರಥಮ ಬಾರಿಗೆ ಗುತ್ತಿಗೆಯಲ್ಲಿ ಮೀಸಲಾತಿಯನ್ನು ಕಲ್ಪಿಸಿದವು. ಪರಿಶಿಷ್ಟ ವರ್ಗಗಳ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಾಗಮೋಹನದಾಸ್ ನೇತೃತ್ವದ ಸಮಿತಿ ರಚನೆ ಮಾಡಿದ್ದೆವು. ಇಂತಹ ಉತ್ತಮ ಕೆಲಸವನ್ನು ಮಾಡಿ ಎಂದರೆ, ಪುಕ್ಕಟೆ ಪ್ರಚಾರ ಪಡೆಯುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನುತ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ವರುಣ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಶಾಸಕರಾಗಿದ್ದ ವರುಣ ಕ್ಷೇತ್ರಕ್ಕೆ ೧,೭೦೦ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದ್ದರಿಂದ ಪ್ರತಿಯೊಂದು ಹಳ್ಳಿಯೂ ಅಭಿವೃದ್ಧಿಗೊಂಡು ಮಾದರಿ ಕ್ಷೇತ್ರವಾಗಿದೆ. ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿ ಆಡಳಿತ ನಡೆಸಿದ ಅವರ ರಾಜಕಾರಣ ನಮಗೆ ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.
ವೇದಿಕೆ ಸಮಾರಂಭದಲ್ಲೇ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಸ್ಪಽಸಿ, ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂಬ ಕಸಬಾ ಹೋಬಳಿಯ ದಲಿತ ಮುಖಂಡರ ಒತ್ತಾಯದ ಪತ್ರವನ್ನು ಎಐಸಿಸಿ ಅಧ್ಯಕ್ಷರಿಗೆ ಬರೆದಿರುವುದನ್ನು ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಪ್ರಸ್ತಾಪಿಸುತ್ತಿದ್ದಂತೆ ನೆರೆದಿದ್ದ ಜನರು ಹರ್ಷೋದ್ಗಾರಗೈದರು.
ಬುದ್ಧ ವಿಹಾರದ ಬೋಧಿರತ್ನ ಭಂತೇಜಿ, ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ವಸತಿ ಯೋಜನೆ ಜಾಗೃತ ಸಮಿತಿಯ ಮಾಜಿ ಅಧ್ಯಕ್ಷ ಸುನಿಲ್ ಬೋಸ್, ಜಿ.ಪಂ. ಮಾಜಿ ಸದಸ್ಯ ಕೆ.ಮಹದೇವ, ಮಾಜಿ ಉಪ ಪ್ರಧಾನ ಡಿ.ಆರ್.ಮೂರ್ತಿ, ಕುರುಬರ ಸಂಘದ ಅಧ್ಯಕ್ಷ ಎನ್.ಎಸ್.ಮಹದೇವಸ್ವಾಮಿ, ಗ್ರಾಪಂ ಅಧ್ಯಕ್ಷ ಆನಂದ, ಉಪಾಧ್ಯಕ್ಷ ಚೆನ್ನಮ್ಮ, ಸದಸ್ಯ ಡಿ.ನಾಗರಾಜು, ಪುರಸಭೆ ಅಧ್ಯಕ್ಷ ಮದನರಾಜು, ಸದಸ್ಯರಾದ ಟಿ.ಎಂ.ನಂಜುಂಡಸ್ವಾಮಿ, ಬಾದಾಮಿ ಮಂಜು, ಸಿ.ಪ್ರಕಾಶ, ತಾ.ಪಂ ಮಾಜಿ ಅಧ್ಯಕ್ಷ ಅಂದಾನಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ಮಹದೇವಣ್ಣ, ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ದೇಗೌಡ, ಮಹಿಳಾ ಅಧ್ಯಕ್ಷ ಕುಪ್ಯ ಭಾಗ್ಯಮ್ಮ, ಲತಾ ಜಗದೀಶ್, ಮುಖಂಡರಾದ ಹುಣಸೂರು ಬಸವಣ್ಣ, ಹೊನ್ನಯ್ಯ, ಎಸ್.ರಾಜಪ್ಪ, ಎಸ್.ಬಸವಣ್ಣ, ಲೋಕೇಶ್, ಕಂಬಯ್ಯ, ರಾಚಯ್ಯ, ಮಹದೇವ, ಅಣ್ಣಯ್ಯ, ರಂಗಸಮುದ್ರ ಮಂಜುನಾಥ, ರಂಗಸ್ವಾಮಿ, ನಂಜುಂಡ, ಎಂ. ಪುಟ್ಟರಾಜು, ಹರೀಶ, ಲಿಂಗಮೂರ್ತಿ, ಬಿಳಿಗೆರೆಹುಂಡಿ ಬಸವರಾಜು ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

31 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

39 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

1 hour ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

1 hour ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

2 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago