Mysore
24
overcast clouds

Social Media

ಗುರುವಾರ, 10 ಏಪ್ರಿಲ 2025
Light
Dark

ಕೊಡಗು : ಕೖೆ ಕಾರ್ಯಕರ್ತರಿಂದ ಸಿದ್ದುಗೆ ಸ್ವಾಗತ

ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿದ್ದು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಅಲ್ಲಿಯ ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ.

ಈ ಸಂಬಂಧ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರುಗಳು ಸ್ವಾಗತಿಸಿದರು.

ಜಿಲ್ಲೆಯ ಪೊನ್ನಂಪೇಟೆಗೆ ಭೇಟಿ ನೀಡಲಿದ್ದು ಆ ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ತದನಂತರ ದೇವರಕೋಲ್ಲಿ ರಾಜ್ಯ ಹೆದ್ದಾರಿ, ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಿಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ