ಜಿಲ್ಲೆಗಳು

ಕೊಡಗು : ಕೖೆ ಕಾರ್ಯಕರ್ತರಿಂದ ಸಿದ್ದುಗೆ ಸ್ವಾಗತ

ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿದ್ದು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಅಲ್ಲಿಯ ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ.

ಈ ಸಂಬಂಧ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರುಗಳು ಸ್ವಾಗತಿಸಿದರು.

ಜಿಲ್ಲೆಯ ಪೊನ್ನಂಪೇಟೆಗೆ ಭೇಟಿ ನೀಡಲಿದ್ದು ಆ ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ತದನಂತರ ದೇವರಕೋಲ್ಲಿ ರಾಜ್ಯ ಹೆದ್ದಾರಿ, ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಿಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

 

andolanait

Recent Posts

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

5 mins ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

5 mins ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

2 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

3 hours ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

3 hours ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

3 hours ago