ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹುಟ್ಟು ಹಬ್ಬದ ಅಂಗವಾಗಿ ನಡೆದ ಸಿದ್ದರಾಮಯ್ಯ75 ಅಮೃತ ಮಹೋತ್ಸವ ಚಿನ್ನದ ಪದಕದ ದತ್ತಿಯನ್ನು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನ್ಯ ಕುಲಪತಿಗಳಾದ ಹೇಮಂತ್ ಕುಮಾರ್ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು.
ಇದೆ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಅಮೃತ ಮಹೋತ್ಸವದ ನೆನಪಿನಾರ್ಥ ಪುರಾಣಪ್ರಸಿದ್ಧವಾದ ನಾಗಲಿಂಗ ಪುಷ್ಪ ಶಶಿ ಯನ್ನು ಕ್ರಾಫರ್ಡ್ ಹಾಲ್ ಅವರಣದಲ್ಲಿ ಗೌರವಾನ್ವಿತ ಕುಲಪತಿಗಳು ನೆಡುವುದರ ಮೂಲಕ ಮೂಲಕ ನೀರೆರೆದರು . ನಂತರದಲ್ಲಿ 75 ತೆಂಗಿನ ಸಸಿಗಳನ್ನು ರೈತ ಸಂಘದ ಪದಾಧಿಕಾರಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮೈಸೂರು ವಿವಿ ಕುಲಸಚಿವರಾದ ಪ್ರೊಫೆಸರ್ ಶಿವಪ್ಪ, ಮೈಸೂರು ಡಿಸಿಸಿ ಅಧ್ಯಕ್ಷರಾದ ಡಾ ಬಿಜೆ ವಿಜಯ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮರಿಗೌಡ, ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ವಿದ್ಯಾಸಾಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್ ಹಾಗೂ ಜಿಲ್ಲಾ ಕಾಂಗ್ರೆಸಿನ ನೂರಾರು ಪದಾಧಿಕಾರಿಗಳು ಈ ಸಂದರ್ಭದಲ್ಲಿ
ಭಾಗವಹಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…