ಜಿಲ್ಲೆಗಳು

ಶ್ರೀ ಸಮ್ಮೇದ ಶಿಖರ್ಜಿ ಪ್ರವಾಸಿತಾಣ ಮಾಡದಂತೆ ಮೌನ ಪ್ರತಿಭಟನೆ

ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ಜೈನ ಸಮಾಜದ ಮುಖಂಡರು ಕೂಡಲೇ ಪ್ರವಾಸಿ ತಾಣದ ಅನುಮತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಇದಕ್ಕೂ ಮುನ್ನ ನಗರದ ಗಾಂಧಿ ವೃತ್ತದಿಂದ ಮೌನ ಮೆರವಣಿಗೆ ಆರಂಭಿಸಿದ ಸಮಾಜದ ಮುಖಂಡರು ಅಶೋಕ ರಸ್ತೆ, ಇರ್ವಿನ್ ರಸ್ತೆ, ಜೆಎಲ್‌ಬಿ ರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಮೆರವಣಿಗೆ ಅಂತ್ಯಗೊಳಿಸಿದರು.
ಪ್ರತಿಭಟನೆಯಲ್ಲಿ ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಉಪಾಧ್ಯಕ್ಷ ಬಿ.ಭರತ್ ರಾಜ್, ಕೋಶಾಧ್ಯಕ್ಷ ಜ್ವಾಲೇಂದ್ರ ಪ್ರಸಾದ್, ಕಾರ್ಯದರ್ಶಿ ಎಂ.ಆರ್.ಸುನಿಲ್ ಕುಮಾರ್, ಸಹ ಕಾರ್ಯದರ್ಶಿ ಪಿ.ಎಸ್. ಲಕ್ಷ್ಮೀಶ್ ಬಾಬು, ಎ.ಎನ್.ಧರಣೇಂದ್ರನ್, ಕೆ.ಚಂದ್ರಶೇಖರ್ ಆರಿಗ, ಅಶೋಕ್ ಪಾಟೀಲ್, ವಿ.ಭರತ್, ಎಸ್.ಪಿ.ಶ್ರೀಕಾಂತ್, ವಸುಪಾಲ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

6 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

12 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

15 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

15 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

15 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

19 hours ago