ಜಿಲ್ಲೆಗಳು

ಗಾಯಕ ಸಿ.ಎಂ ನರಸಿಂಹಮೂರ್ತಿಗೆ ಪ್ರತಿಷ್ಠಿತ ಶಂಕರ್‌ನಾಗ್‌ ಪ್ರಶಸ್ತಿ

ಚಾಮರಾಜನಗರ  : ಜಿಲ್ಲೆಯ ನಿವಾಸಿ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರು ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದೇ ತಿಂಗಳ 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರಂಗ ಪಯಣ ತಂಡದವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಶಂಕರ್ ನಾಗ್ ನಾಟಕೋತ್ಸವದಲ್ಲಿ ಇವರಿಗೆ ಚಿತ್ರ ನಟರಾದ ರಮೇಶ್ ಭಟ್ ಮತ್ತು ಮಂಡ್ಯ ರಮೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಚಾಮರಾಜನಗರ ಗಡಿ ಜಿಲ್ಲೆಯ ನಿವಾಸಿಯಾಗಿರುವ ಇವರಿಗೆ ಈ ಹಿಂದೆಯೂ ಕೂಡ ಅಮೆರಿಕಾದ ಅಕ್ಕ ಒಕ್ಕೂಟ ನಡೆಸುವ ವಿಶ್ವಕನ್ನಡ ಸಮ್ಮೇಳನ ಸೇರಿದಂತೆ ನೂರಾರು ಅಂತರಾಷ್ಟ್ರೀಯ ರಾಷ್ಟ್ರೀಯ ರಾಜ್ಯ ಮತ್ತು ಸ್ಥಳೀಯ ಸಾಹಿತ್ಯ ಸಮ್ಮೇಳನಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿ ಜನ ಮೆಚ್ಚುಗೆ ಗಳಿಸಿದ್ದಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಸಂಗೀತ ಜಾನಪದ ರಂಗಭೂಮಿಗೆ ಸಂಬಂಧಿಸಿದಂತೆ ಉತ್ಸವಗಳನ್ನು ನಡೆಸುತ್ತಾರೆ. ಕನ್ನಡ ಜಾನಪದ ಸಾಹಿತ್ಯ ರಂಗಭೂಮಿ ಕ್ಷೇತ್ರಗಳಿಗೆ ತಮ್ಮದೇ ಕೊಡುಗೆ ನೀಡುತ್ತಾ ಬಂದಿದ್ದಾರೆ.   ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯ ಯುವ ಪ್ರಶಸ್ತಿ ಕರ್ನಾಟಕ ನಾಟಕ ಅಕಾಡೆಮಿ ಸಿಜಿಕೆ ಪ್ರಶಸ್ತಿ, ಮಂಟೇಸ್ವಾಮಿ ಪ್ರಶಸ್ತಿ, ದೂರದರ್ಶನ ಚಂದನ ಪ್ರಶಸ್ತಿ , ಎಸ್ ಕೆ ಕರೀಮ್ ಖಾನ್ ಪ್ರಶಸ್ತಿ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತು ,ಕರ್ನಾಟಕ ರಂಗ ಪರಿಷತ್ತು ,ಕರ್ನಾಟಕ ಜಾನಪದ ಪರಿಷತ್ತು, ಭಾರತ ಯಾತ್ರ ಕೇಂದ್ರ ರಂಗವಾಹಿನಿ ಸಂಸ್ಥೆಗಳು ಇವರನ್ನು ಅಭಿನಂದಿಸಿವೆ.

andolanait

Recent Posts

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

5 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

18 mins ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

27 mins ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

45 mins ago

ದುರಂದರ್ ದರ್ಬಾರ್….. ಮರಳಿ ಟ್ರ್ಯಾಕ್ ಗೆ ಬಂತು ಬಾಲಿವುಡ್.?

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…

1 hour ago

ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…

1 hour ago