ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಸಲೀಂ ಅಹ್ಮದ್ ತೀವ್ರವಾಗಿ ಖಂಡಿಸಿದ್ದಾರೆ.
ಇತಿಹಾಸ, ತ್ಯಾಗ, ಬಲಿದಾನ, ಸ್ವಾತಂತ್ರ್ಯ, ಸಂಗ್ರಾಮ, ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು, ಕಳೆದ ಎಂಟು ವರ್ಷಗಳ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ ವಿರೋಧಿಸಿ ಈ ವಿಚಾರಗಳ ಮೂಲಕ ಭಾರತ್ ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ದೇಶಾದ್ಯಂತ ಸುಮಾರು 3600 ಕಿಲೋಮೀಟರ್ ರಾಹುಲ್ ಗಾಂಧಿ ನಾಯಕತ್ವದಲ್ಲಿ ಪಾದಯಾತ್ರೆ ಪ್ರಾರಂಭ ಮಾಡಲಿದ್ದು ಈಗಾಗಲೇ ಕನ್ಯಾಕುಮಾರಿಯಿಂದ ಪ್ರಾರಂಭಗೊಂಡ ಯಾತ್ರೆ ತಮಿಳುನಾಡು, ಕೇರಳ ಮುಗಿಸಿ ಕರ್ನಾಟಕ ರಾಜ್ಯಕ್ಕೆ ಬಂದಿದೆ.
ಕಟೀಲ್ ಅವರು ಒಂದು ಜವಾಬ್ದಾರಿ ಪಕ್ಷದ ಅಧ್ಯಕ್ಷರಾಗಿ ಇಂತಹ ಹೇಳಿಕೆಗಳನ್ನು ಕೊಡುವುದಕ್ಕೆ ನಾಚಿಕೆ ಆಗಬೇಕು, ಹೇಳಿಕೆ ನೀಡುವ ಕನಿಷ್ಠ ಪರಿಜ್ಞಾನ ಅವರಿಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಭಾರತೀಯ
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…