ಮೈಸೂರು : ತೀವ್ರ 12 ವರ್ಷದ ಬಾಲಕನನ್ನು ಕೊಂಡಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನಂಜನಗೂಡಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಮತ್ತೊಂದು ಚಿರತೆ 12 ವರ್ಷದ ಮಗುವಿನ ಮೇಲೆ ದಾಳಿ ಮಾಡಿ ಇಂದು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿರತೆ ಕಳೆದ ಮೂರು ಬಾರಿ ದಾಳಿ ಮಾಡಿರುವ ಪ್ರದೇಶಗಳು ಸುಮಾರು 2 ಕಿ.ಮೀ ವ್ಯಾಪ್ತಿಯಲ್ಲಿ ಇದೆ. ಬೆಳಿಗ್ಗೆ ಯೇ ನಮ್ಮ ಅರಣ್ಯ ಸಂರಕ್ಷಣಾಧಿಕಾರಿಗಳ ಬಳಿ ಮಾತನಾಡಿ 2 ರಿಂದ 3 ಕಿಮೀ ವ್ಯಾಪ್ತಿಯಲ್ಲಿ ವಿಶೇಷ ಪಡೆಗಳನ್ನು ಬಳಸಿ, ಚಿರತೆಗಳನ್ನು ಸೆರೆ ಹಿಡಿಯಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶ ನೀಡಿದ್ದು, ಗಡಿ ಪ್ರದೇಶದಲ್ಲಿ ವಿಶೇಷ ಕಾವಲುಗಾರರನ್ನು ನೇಮಿಸಿ, ಜನರಲ್ಲಿ ಜಾಗೃತಿ ಮೂಡಿಸುವುದು, ಸಂಜೆ ಮೇಲೆ ಹೊರಗೆ ತೆರಳದಂತೆ ತಿಳಿಸುವುದು ಮಾಡಬೇಕು. ಗಡಿ ಪ್ರದೇಶದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆಯವರು ಬಂದೂಕುಧಾರಿಗಳಾಗಿ ಕಾವಲು ಕಾಯಬೇಕು. ಇನ್ನು ಹೆಚ್ಚಿನ ಬಳಿ ನೀಡಲು ಸಾಧ್ಯವಿಲ್ಲ. ಕೂಡಲೇ ಕ್ರಮಕೈಗೊಳ್ಳಲು ವಿಶೇಷ ತಂಡ ರಚಿಸಿ ಮೃತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಹೆಚ್ಚಿಸಲಾಗಿದ್ದು ಕೂಡಲೇ ಕುಟುಂಬದವರಿಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಖಂಡಿತವಾಗಿಯೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮೊನ್ನೆಯಷ್ಟೇ ಒಂದು ಚಿರತೆಯನ್ನು ಹಿಡಿಯಲಾಗಿದೆ. ಇದನ್ನೂ ಆದಷ್ಟು ಬೇಗ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು ಎಂದರು.
ಬಾಲಕನನ್ನು ಕೊಂದ ಚಿರತೆಯ ತೀವ್ರ ಹುಡುಕಾಟಕ್ಕೆ ವಿಶೇಷ ತಂಡ ರಚನೆ : ಸಿಎಂ ಬೊಮ್ಮಾಯಿ





