ಸಂಸದ ಪ್ರತಾಪಸಿಂಹಗೆ ಮುಖಂಡ ಪ್ರದೀಪ್‌ಕುಮಾರ್ ಸಲಹೆ
ಮೈಸೂರು: ಟಿಪ್ಪು ರೈಲಿನ ಹೆಸರು ನಾನೇ ಬದಲಿಸಿದ್ದೇನೆ ಎನ್ನುವ ಅಹಂಕಾರದ ಮಾತುಗಳನ್ನು ಆಡುವುದು ಬಿಡಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಎಂ.ಪ್ರದೀಪ್‌ಕುಮಾರ್ ಸಂಸದ ಪ್ರತಾಪಸಿಂಹ ಅವರಿಗೆ ಸಲಹೆ ನೀಡಿದ್ದಾರೆ.
ಬಾರ್ ಮುಂದೆ ನಿಂತು ಮಾತನಾಡುವವರ ರೀತಿಯಲ್ಲಿ ನೀವು ಮಾತನಾಡುತ್ತೀದ್ದೀರಿ. ಮೈಸೂರಿನ ಸಂಸದರಾದಿ ಎರಡು ಬಾರಿ ಆಕಸ್ಮಿಕವಾಗಿ ಆಯ್ಕೆಯಾದ ನಿಮ್ಮನ್ನು ಜನ ಸಹಿಸಿಕೊಂಡಿದ್ದಾರೆ. ನೀವು ಸಮಾಜಗಳ ನಡುವೆ ಅಶಾಂತಿ ಉಂಟು ಮಾಡುತ್ತಿರುವ ಹೇಳಿಕೆಯನ್ನು ಪ್ರತಿದಿನ ನೀಡುತ್ತಿದ್ದೀರಿ. ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದ ಮೈಸೂರಿನಲ್ಲಿ ಸಾಮರಸ್ಯ ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.
ಮೈಸೂರಿನ ಒಡೆಯರ್ ಅವರ ಬಗ್ಗೆ ಎಲ್ಲರಿಗೂ ಗೌರವವಿದೆ. ಅವರ ಹೆಸರನ್ನು ಒಂದು ರೈಲಿಗೆ ಸೀಮಿತ ಮಾಡುವ ಬದಲು ರೈಲ್ವೆ ನಿಲ್ದಾಣಕ್ಕೆ ಇಡುವಂತೆ ನೋಡಿಕೊಳ್ಳಿ. ಅದನ್ನು ಬಿಟ್ಟು ದಿನ ಬೆಳಗಾದರೆ ಟಿಪ್ಪು ಹೆಸರು ಪಠಿಸುತ್ತಾ ಜನರ ಭಾವನೆ ಕೆರಳಿಸುತ್ತೀದ್ದೀರಿ ಎಂದು ಟೀಕಿಸಿದ್ದಾರೆ.
ಮೈಸೂರು ಹೊರ ವರ್ತುಲ ರಸ್ತೆಗೆ ಎಲ್‌ಇಡಿ ದೀಪ ಹಾಕಿಸುವುದು ಸೇರಿ ಹಲವು ಅಭಿವೃದ್ದಿ ಚಟುವಟಿಕೆಗಳನ್ನು ಮಾಡುತ್ತೀದ್ದೀರಿ. ಅದನ್ನು ಸರಿಯಾಗಿ ಮಾಡಿ ಎಂದು ಪ್ರದೀಪ್ ಸಲಹೆ ನೀಡಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…