ಜಿಲ್ಲೆಗಳು

ಸ್ಪೀಡ್ ಸ್ಕೇಟಿಂಗ್ : ಮಂಡ್ಯದ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾಳೆ.
ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ ೧೧-೧೪ ವರ್ಷದೊಳಗಿನ ವಿಭಾಗದ ಸ್ಫರ್ಧೆಯಲ್ಲಿ ಮಂಡ್ಯ ನಗರದ ಸೈಂಟ್ ಥಾಮಸ್ ಇಂಗ್ಲಿಷ್ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಎಸ್.ಎಲ್. ಶಾರ್ವರಿ ೫೦೦ ಮೀ., ೧೦೦೦ ಮೀ. ಹಾಗೂ ೨೦೦೦ ಮೀ. ಮೂರೂ ಸ್ಫರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಕೆಗೆ ಚಿನ್ಮಯ ಶಾಲೆಯ ದೈಹಿಕ ಶಿಕ್ಷಕರಾಗಿರುವ ಜಿ.ಎಚ್.ಶ್ರೀನಿವಾಸ್ ಅವರು ಮಾರ್ಗದರ್ಶನ ಮತ್ತು ತರಬೇತಿ ನೀಡಿರುತ್ತಾರೆ. ಶಾರ್ವರಿ ತಂದೆ ಮಂಡ್ಯ ಪಿಇಎಸ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಸಹ ಬೋಧಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ, ತಾಯಿ ಕೆ.ಬಿ. ಲತಾ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರಿನ ಜ್ಞಾನವಾಹಿನಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

andolanait

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

46 mins ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

52 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

58 mins ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

2 hours ago