Mysore
23
light intensity drizzle
Light
Dark

ಪೊಲೀಸರ ಕಾರ್ಯಕ್ಷಮತೆಗೆ ಕ್ರೀಡೆ ಬಹಳ ಮುಖ್ಯ: ಪೂರ್ಣಿಮ

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್ ಸಿಬ್ಬಂದಿಗೆ ಕಿವಿ ಮಾತು ಹೇಳಿದರು.

ಮಂಗಳವಾರ ನಗರದ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮೈಸೂರು ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಮತ್ತು ಬಲೂನ್ ಹಾರಿಬಿಡುವ ಮೂಲಕ ಚಾಲನೆ ನೀಡಿ, ವಂದನೆ ಸ್ವೀಕರಿಸಿ ಹಾಗೂ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ನಿಮ್ಮ ದಿನದ ಒಂದೂವರೆ ಗಂಟೆ ನಿಮ್ಮ ಆರೋಗ್ಯಕ್ಕಾಗಿ ಮೀಸಲಿಡಿ. ದಿನನಿತ್ಯ ವ್ಯಾಯಮ ಮಾಡುವ ಮೂಲಕ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಿ. ನನಗೆ ಪೋಲಿಸ್ ಇಲಾಖೆ ತುಂಬ ಪ್ರಿಯವಾದ ಇಲಾಖೆ. ನಮ್ಮ ಪೋಷಕರು ಆರೋಗ್ಯ ಇಲಾಖೆಯಲ್ಲಿದ್ದರು. ಹಾಗಾಗಿ ನಾನು ಹೆಚ್ಚು ಪಿಹೆಚ್‌ಸಿ ವಸತಿನಿಲಯಗಳಲ್ಲಿ ಬೆಳೆಯಬೇಕಾಯಿತು. ನನ್ನ ಸಹೋದರರು ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಪೊಲೀಸ್ ಇಲಾಖೆ ನನಗೆ ಪ್ರಿಯವಾದ ಇಲಾಖೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಕಾನೂನು ನಿರ್ವಹಣೆ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರು ಹೆಚ್ಚಿನ ಒತ್ತಡದಿಂದ ಕಾರ್ಯನಿರ್ವಹಿಸುತ್ತಿರುತ್ತಾರೆ. ಈ ದಿಸೆಯಲ್ಲಿ ಕ್ರೀಡೆ ಕೂಡ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಹೆಚ್ಚಿನ ಕಾರ್ಯಕ್ಷಮತೆ, ದಕ್ಷತೆ, ಮನೋಬಲ, ನೈತಿಕ ಸ್ಥೈರ್ಯ ಹಾಗೂ ದೈಹಿಕ ಆರೋಗ್ಯ ವೃದ್ಧಿಗಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೆಲಸದ ಜೊತೆಗೆ ಪ್ರತಿನಿತ್ಯ ಯವುದಾದರೊಂದು ಕ್ರೀಡೆಯನ್ನು ಹವ್ಯಾಸವನ್ನಾಗಿ ಮಾಡಿಕೊಂಡರೆ ಉತ್ತಮ ಎಂದರು. ಇದನ್ನು ಬಹಳಷ್ಟು ಜನ ರೂಢಿಸಿಕೊಂಡಿರುವುದನ್ನು ಕಂಡಿದ್ದೇನೆ ಎಂದರು.

ಇದೇ ವೇಳೆ ಸ್ಪರ್ಧಿಗಳು ಕ್ರೀಡಾ ಪ್ರಮಾಣವಚನವನ್ನು ಸ್ವೀಕರಿಸಿದರು. ಆಕರ್ಷಕ ಪಥಸಂಚಲನ ನಡೆಯಿತು. ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ನ.೨೪ ರಂದು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ಪ್ರವೀಣ್ ಮಧುಕರ್ ಪವಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ