ಜಿಲ್ಲೆಗಳು

ಗನ್‌ಹೌಸ್‌ ವೃತ್ತದಲ್ಲಿ ರಾಜೇಂದ್ರ ಶ್ರೀ ಪ್ರತಿಮೆ ಸ್ಥಾಪನೆ

2017ರಲ್ಲಿ ಸಿದ್ದರಾಮಯ್ಯ ಮೈಸೂರಿನ ಗನ್‌ಹೌಸ್‌ ಸರ್ಕಲ್‌ನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪುತ್ಥಳಿ ನಿರ್ಮಾಣದ ವಿರುದ್ಧ ಕರ್ನಾಟಕ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಪೀಠವು ನಿರ್ಮಾಣಕ್ಕೆ ತಡೆ ನೀಡಿದ್ದರು.

 

ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪಾದಾಚಾರಿ ಮಾರ್ಗಗಳಲ್ಲಿ ಪುತ್ಥಳಿಗಳನ್ನು ನಿರ್ಮಾಣ ಮಾಡುವಂತಿಲ್ಲ ಎಂದು 2013ರಲ್ಲಿ ಸುಪ್ರೀಂ ಕೋರ್ಟ್‌ ಸೂಚಿಸಿದೆ ಎಂದು ಹೈಕೋರ್ಟ್‌ ಉಲ್ಲೇಖಿಸಿತ್ತು. ಹೀಗೆ ಹೈಕೋರ್ಟ್‌ ವಿರೋಧವಿದ್ದರೂ ಸಹ ಇಂದು ( ಡಿಸೆಂಬರ್‌ 8 ) ನಗರದ ಗನ್‌ಹೌಸ್‌ ವೃತ್ತದಲ್ಲಿ ರಾತ್ರೋರಾತ್ರಿ ಕ್ರೇನ್‌ ಮೂಲಕ ದಿಢೀರನೆ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿಯನ್ನು ನಿಲ್ಲಿಸಲಾಗಿದೆ. ಸದ್ಯ ಈ ಘಟನೆಯ ಫೋಟೊ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

 

ಈ ಹಿಂದೆ ಇದೇ ಗನ್ ಹೌಸ್ ಬಳಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪಿಸಲು ಅರಸು ಸಂಘ ಮೈಸೂರು ಮಹಾನಗರ ಪಾಲಿಕೆಯನ್ನು ಸಂಪರ್ಕಿಸಿತ್ತು. ಆದರೆ ಸುಪ್ರೀಂ ಕೋರ್ಟ್‌ ನಿರ್ದೇಶನದ ಪ್ರಕಾರ ಈ ಸ್ಥಳ ಆರು ರಸ್ತೆಗಳು ಕೂಡುವ ವೃತ್ತವಾಗಿದ್ದು, ಇದು ಜನನಿಬಿಡ ಸ್ಥಳವಾಗಿದೆ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪಾದಾಚಾರಿ ಮಾರ್ಗಗಳಲ್ಲಿ ಪುತ್ಥಳಿಗಳನ್ನು ನಿರ್ಮಾಣ ಮಾಡುವಂತಿಲ್ಲ ಎಂದು ತಡೆ ಬಂದ ಕಾರಣ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆಯನ್ನು ಕೈಬಿಡಲಾಗಿತ್ತು. ಆದರೆ ಬಳಿಕ ಇದೇ ಜಾಗದಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆಯಾದ ಕಾರಣ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ ಮೆಟ್ಟಿಲೇರಿತ್ತು.

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

6 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

11 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

15 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

15 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

15 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

18 hours ago