ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಶ್ರೀರಂಗಪಟ್ಟಣದಲ್ಲಿ ಸೆ. 28 ರಿಂದ ಅ.2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022 ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.
ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು, ಶ್ರೀಗಳನ್ನು ಭೇಟಿ ಮಾಡಿ ದಸರಾ ಉದ್ಘಾಟನೆಗೆ ಆಹ್ವಾನಿಸಿದರು.
ಶ್ರೀರಂಗಪಟ್ಟಣ ದಸರಾ ಮಹೋತ್ಸವ-೨೦೨೨ರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್.ಹುಲ್ಮನಿ, ಪಾಂಡವಪುರ ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…