ಶ್ರೀರಂಗಪಟ್ಟಣ: ಸ್ನಾನ ಮಾಡಲು ಹೋದ ಯುವಕನೋರ್ವ ನದಿಯಲ್ಲಿ ಕೊಚ್ಚಿಹೋದ ಘಟನೆ ಇಲ್ಲಿನ ಸಂಗಮ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.
ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್(26) ನದಿಯಲ್ಲಿ ಕೊಚ್ಚಿಹೋದ ಯುವಕನಾಗಿದ್ದಾನೆ. ಕುಟುಂಬಸ್ಥರು, ಸ್ನೇಹಿತರೊಂದಿಗೆ ಪೂಜೆಗಾಗಿ ಶ್ರೀರಂಗಪಟ್ಟಣದ ಸಂಗಮಕ್ಕೆ ಬಂದಿದ್ದ.
ಬೆಳಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಯುವಕ ನದಿಪಾಲಾಗಿದ್ದಾನೆ. ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ 30ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಬೋಟ್ ಮತ್ತು ಪಾತಾಳ ಗರಡಿ ಬಳಸಿ ಹುಡಕಾಟ ನಡೆಸಿದ್ದಾರೆ. ಯುವಕನ ಶವಕ್ಕಾಗಿ ಪ್ರತ್ಯೇಕ ತಂಡಗಳಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಸಂಗಮದ ಬಳಿ ಅಶೋಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಭಾರೀ ಪ್ರಮಾಣದ ನೀರು ಹರಿದುಬರುತ್ತಿದ್ದರೂ ಸಂಗಮ ಸೇರಿದಂತೆ ಶ್ರೀರಂಗಪಟ್ಟಣದ ಕೆಲವು ಕಡೆಗಳಲ್ಲಿ ಯಾವುದೇ ಮುನ್ನೆಚ್ಚರಿಕೆ ಇಲ್ಲದಂತಾಗಿದೆ. ಈ ಬಗ್ಗೆ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದ ದೃಶ್ಯ ಕಂಡುಬಂತ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Next Article ನದಿಗೆ ಹಾರಿ ವಿದ್ಯಾರ್ಥಿ ಸಾವು