ಜಿಲ್ಲೆಗಳು

ಶ್ರೀರಂಗಪಟ್ಟಣ : ಡಿ.9ರಂದು ಸಾರ್ವಜನಿಕರ ಕುಂದುಕೊರತೆ ಸಭೆ

ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್‌ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಆರ್.ಮೋಹನ್‌ರೆಡ್ಡಿ ಹಾಗೂ ಜಿ.ಕೆ.ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು, ಅಹವಾಲುಗಳಿದ್ದಲ್ಲಿ ಸ್ವೀಕರಿಸಲಾಗುವುದು. ಶ್ರೀರಂಗಪಟ್ಟಣ ತಾಲ್ಲೂಕಿನ ಸಾರ್ವಜನಿಕರು ಅಂದು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರು ಮತ್ತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾುಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

8 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

9 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

9 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

9 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

9 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

10 hours ago