ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.೯ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ನಡೆಸಲಿದ್ದಾರೆ.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್‌ಪಿ ಟಿ.ಆರ್.ರಾಜಶೆಟ್ಟಿ , ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಆರ್.ಮೋಹನ್‌ರೆಡ್ಡಿ ಹಾಗೂ ಜಿ.ಕೆ.ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು, ಅಹವಾಲುಗಳಿದ್ದಲ್ಲಿ ಸ್ವೀಕರಿಸಲಾಗುವುದು. ಶ್ರೀರಂಗಪಟ್ಟಣ ತಾಲ್ಲೂಕಿನ ಸಾರ್ವಜನಿಕರು ಅಂದು ಲೋಕಾಯುಕ್ತ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ತಮ್ಮ ದೂರು ಮತ್ತು ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾುಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…