ಹನೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು.
ತಾಲೂಕಿನ ಬೈಲೂರು ಹೊಸಪಾಳ್ಯ ಅರೆಕಾಡುವಿನ ದೊಡ್ಡಿ ಕಂಬಿಗುಡ್ಡೆ, ಗುರುಮಲ್ಲಪ್ಪನ ದೊಡ್ಡಿ ಹುಣಸೇಪಾಳ್ಯ ಗ್ರಾಮಗಳ ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಅವರು ಮಾತನಾಡಿದರು.
ಕಳೆದ ಐದು ವರ್ಷಗಳಿಂದ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದಲ್ಲಿ ಹನೂರು ಶೈಕ್ಷಣಿಕ ವಲಯ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದೇ ನಿಟ್ಟಿನಲ್ಲಿ ಈ ಬಾರಿಯೂ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಶಾಲೆಯಲ್ಲಿ ಮಾಡುವ ಪಾಠ ಪ್ರವಚನಗಳ ಬಗ್ಗೆ ಆಸಕ್ತಿ ವಹಿಸಿ ಮನೆಯಲ್ಲಿಯೂ ಸಹ ಚೆನ್ನಾಗಿ ಓದಿಕೊಳ್ಳಬೇಕು, ವಿದ್ಯಾರ್ಥಿಗಳಿಗೆ ಪೋಷಕರು ಸಹ ಸಹಕರಿಸಿ ಅವರ ಓದಿಗೆ ಶ್ರಮಿಸಬೇಕು ಹಾಗಾದರೆ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಯ ಉತ್ತಮ ಅಂಕ ಗಳಿಸಲು ಸಾಧ್ಯ ಎಂದರು.
ಪ್ರತಿ ಮನೆಗಳಿಗೂ ಭೇಟಿ: ಕಾಡಂಚಿನ ಗ್ರಾಮಗಳ ವಿದ್ಯಾರ್ಥಿಗಳ ಪ್ರತಿ ಮನೆಗಳಿಗೆ ಖುದ್ದು ಭೇಟಿ ನೀಡಿ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ವಿದ್ಯಾರ್ಥಿಗಳು ಯಾವ ಪಾಠಗಳು ನಿಮಗೆ ಕಷ್ಟವೆನಿಸುತ್ತಿದೆ ಅದರ ಬಗ್ಗೆ ಸಂಬಂಧಪಟ್ಟ ಶಿಕ್ಷಕರುಗಳ ಬಳಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಹಾಗಿದ್ದರೆ ಮಾತ್ರ ನೀವು ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು ಇದೇ ಸಂದರ್ಭದಲ್ಲಿ ಪೋಷಕರಿಗೂ ಸಹ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದರು.
ಸಾರ್ವಜನಿಕರಿಂದ ಮೆಚ್ಚುಗೆ : ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಇನ್ನು ಮೂರು ತಿಂಗಳು ಗಳ ಕಾಲಾವಕಾಶ ಇದ್ದರು ಸಹ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈಗಿನಿಂದಲೇ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿದ್ದಾರೆ. ಇದರಿಂದ ಆತ್ಮಸ್ಥೈರ್ಯ ಹೆಚ್ಚಾಗಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಾರೆ ಎಂದು ಪೋಷಕರು ಪ್ರಶಂಸೆ ವ್ಯಕ್ತಪಡಿಸಿದರು.
ವಿವಿಧ ಕಾರಣಗಳಿಂದ ಶಾಲೆ ಬಿಟ್ಟ ಮೂವರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿನೀಡಿ ಮನವೊಲಿಸಿ ಶಾಲೆಗೆ ಬರುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಒಡೆಯರಪಾಳ್ಯ ಸಿ ಆರ್ ಪಿ ನಟೇಶ್ ಪಿ ಜಿ ಪಾಳ್ಯ ಸಿ ಆರ್ ಪಿ ದೇವರಾಜು, ಮುಖ್ಯ ಶಿಕ್ಷಕ ಚುಂಚಯ್ಯ ಸಹ ಶಿಕ್ಷಕರುಗಳಾದ ವಿ.ವೆಂಕಟೇಶ್, ಮೋಹನ್ ಕುಮಾರ್, ರಾಘವೇಂದ್ರ, ಕೆ.ವೆಂಕಟೇಶ್, ಚಿದಾನಂದ, ರವಿಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…