Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

SSLC ವಿದ್ಯಾರ್ಥಿಗಳೊಂದಿಗೆ ಶಾಸಕ ಆರ್ ನರೇಂದ್ರ ಸಂವಾದ

ಹನೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಂಡು ಮುಂದಿನ ಬಾರಿಯೂ ಗರಿಷ್ಠ ಫಲಿತಾಂಶ ಪಡೆಯುವ ಮೂಲಕ ಹನೂರು ತಾಲ್ಲೂಕಿಗೆ ಕೀರ್ತಿ ತರುವಂತಗಬೇಕು ಎಂದು ಶಾಸಕ ನರೇಂದ್ರ ತಿಳಿಸಿದರು.

ಪಟ್ಟಣದ ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅರಣ್ಯದೊಳಗಿನ ಗ್ರಾಮದ ಮಕ್ಕಳು ಹನೂರು ಪಟ್ಟಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದಕ್ಕೆ ಕಾರಣ ಸರ್ಕಾರ ನೀಡಿರುವ ಸೌಲತ್ತುಗಳು. ಸರ್ಕಾರಿ ಶಾಲಾ ಕಾಲೇಜುಗಳು ಗ್ರಾಮೀಣ ಮಟ್ಟದ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಕಾಳಜಿ ವಹಿಸುತ್ತಿವೆ. ಆದ್ದರಿಂದ ವಿವಿಧ ಗ್ರಾಮಗಳಿಂದ ಬಂದು ವಿದ್ಯಾಭ್ಯಾಸ ಮಾಡುವ ಎಲ್ಲಾ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು. ಸರ್ಕಾರದ ಈ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬದುಕು ರೂಪಿಸಿಕೊಂಡು, ನಿಮ್ಮ ಗ್ರಾಮಕ್ಕೆ ಮತ್ತು ನಿಮ್ಮ ತಂದೆ ತಾಯಿಗಳಿಗೆ ಗೌರವ ತರುವಂತಹ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸೋಮಶೇಖರ್, ಸಂಪತ್ ಕುಮಾರ್, ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಕಾಲೇಜು ಪ್ರಾಂಶುಪಾಲ ಸ್ವಾಮಿ ಬಿ ಆರ್ ಸಿ ದಿನೇಶ್, ಶಿಕ್ಷಕರು ಉಪನ್ಯಾಸಕರು ಮತ್ತು ಮಕ್ಕಳು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!