ಚಾಮರಾಜನಗರ: ಬಿಜೆಪಿ ವತಿಯಿಂದ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶವು ನ.೨೦ ರಂದು ಬಳ್ಳಾರಿಯಲ್ಲಿ ನಡೆಯಲಿದ್ದು, ಜಿಲ್ಲೆಯ ೬ ರಿಂದ ೭ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು.
ಬಜೆಪಿಯ ರಾಷ್ಟ್ರೀಯ ಅಧ್ಯಕ್ಷ .ಪಿ.ನಡ್ಡಾ ಅವರು ಭಾಗವಹಿಸುವ ಸಮಾವೇಶಕ್ಕೆ ಜಿಲ್ಲೆಯಿಂದ ೫೦ ಬಸ್‌ಗಳಲ್ಲಿ ಜನರು ತೆರಳಲಿದ್ದಾರೆ. ಮೀಸಲು ಹೆಚ್ಚಳ ಮಾಡಿದ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರಿಗೆ ಅಭಿನಂದನೆ ಸಲ್ಲಿಸಲು ಸಮಾವೇಶ ನಡೆಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಮಾವೇಶದಲ್ಲಿ ೧೦ ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಕೊಪ್ಪಳ, ರಾಯಚೂರು, ಚಿತ್ರದುರ್ಗ, ಬಳ್ಳಾರಿ ಸುತ್ತಲಿನ ಪ್ರದೇಶಗಳಿಂದ ಅತಿ ಹೆಚ್ಚು ಜನರನ್ನು ನಿರೀಕ್ಷಿಸಲಾಗಿದೆ ಎಂದರು.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಬೇಕೆಂದು ೪೦ ವರ್ಷಗಳ ಕಾಲ ಹೋರಾಟ ಮಾಡಲಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ವಾಲ್ಮೀಕಿ ಭವನ ನಿರ್ಮಾಣಕ್ಕೆ ತಲಾ ೧ ಕೋಟಿ ರೂ. ನೀಡಿದರು. ವಾಲ್ಮೀಕಿ ಜಯಂತಿ ಆಚರಣೆಗೆ ಆದೇಶಿಸಿ ಸರ್ಕಾರಿ ರಜೆ ಘೋಷಿಸಿದರು. ಪರಿವಾರ ಮತ್ತು ತಳವಾರ ಎಂಬ ಪದಗಳನ್ನು ಎಸ್ಟಿ ಪಟ್ಟಿಗೆ ಸೇರಿಸಿದ್ದಾರೆ ಎಂದರು.
ಪರಿಶಿಷ್ಟ ಪಂಗಡದ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನಲ್ಲಿ ೨೫೪ ದಿನಗಳ ಕಾಲ ಹೋರಾಟ ಮಾಡಿ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ಧಾರೆ. ಇದಕ್ಕೆ ಮುಖ್ಯಮಂತ್ರಿ ಕಾರಣ. ಇದೆಲ್ಲವನ್ನು ಸಮಾವೇಶ ಮೂಲಕ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.





