ಜಿಲ್ಲೆಗಳು

ಎಸ್ಟಿ ಸಮಾವೇಶಕ್ಕೆ ಜಿಲ್ಲೆಯ 7 ಸಾವಿರ ಜನರು

ಚಾಮರಾಜನಗರ: ಬಿಜೆಪಿ ವತಿಯಿಂದ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶವು ನ.೨೦ ರಂದು ಬಳ್ಳಾರಿಯಲ್ಲಿ ನಡೆಯಲಿದ್ದು, ಜಿಲ್ಲೆಯ ೬ ರಿಂದ ೭ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು.
ಬಜೆಪಿಯ ರಾಷ್ಟ್ರೀಯ ಅಧ್ಯಕ್ಷ   .ಪಿ.ನಡ್ಡಾ ಅವರು ಭಾಗವಹಿಸುವ ಸಮಾವೇಶಕ್ಕೆ ಜಿಲ್ಲೆಯಿಂದ ೫೦ ಬಸ್‌ಗಳಲ್ಲಿ ಜನರು ತೆರಳಲಿದ್ದಾರೆ. ಮೀಸಲು ಹೆಚ್ಚಳ ಮಾಡಿದ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರಿಗೆ ಅಭಿನಂದನೆ ಸಲ್ಲಿಸಲು ಸಮಾವೇಶ ನಡೆಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಮಾವೇಶದಲ್ಲಿ ೧೦ ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಕೊಪ್ಪಳ, ರಾಯಚೂರು, ಚಿತ್ರದುರ್ಗ, ಬಳ್ಳಾರಿ ಸುತ್ತಲಿನ ಪ್ರದೇಶಗಳಿಂದ ಅತಿ ಹೆಚ್ಚು ಜನರನ್ನು ನಿರೀಕ್ಷಿಸಲಾಗಿದೆ ಎಂದರು.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಬೇಕೆಂದು ೪೦ ವರ್ಷಗಳ ಕಾಲ ಹೋರಾಟ ಮಾಡಲಾಗಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ವಾಲ್ಮೀಕಿ ಭವನ ನಿರ್ಮಾಣಕ್ಕೆ ತಲಾ ೧ ಕೋಟಿ ರೂ. ನೀಡಿದರು. ವಾಲ್ಮೀಕಿ ಜಯಂತಿ ಆಚರಣೆಗೆ ಆದೇಶಿಸಿ ಸರ್ಕಾರಿ ರಜೆ ಘೋಷಿಸಿದರು. ಪರಿವಾರ ಮತ್ತು ತಳವಾರ ಎಂಬ ಪದಗಳನ್ನು ಎಸ್ಟಿ ಪಟ್ಟಿಗೆ ಸೇರಿಸಿದ್ದಾರೆ ಎಂದರು.
ಪರಿಶಿಷ್ಟ ಪಂಗಡದ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನಲ್ಲಿ ೨೫೪ ದಿನಗಳ ಕಾಲ ಹೋರಾಟ ಮಾಡಿ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಿದ್ಧಾರೆ. ಇದಕ್ಕೆ ಮುಖ್ಯಮಂತ್ರಿ ಕಾರಣ. ಇದೆಲ್ಲವನ್ನು ಸಮಾವೇಶ ಮೂಲಕ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

1 hour ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

1 hour ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

1 hour ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

1 hour ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

1 hour ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

1 hour ago