ಜಿಲ್ಲೆಗಳು

ರಾಜ್ಯ ENT ತಜ್ಞರ ಸಂಘದ ಅಧ್ಯಕ್ಷರಾಗಿ ಡಾ.ಎ.ಆರ್.ಬಾಬು ಆಯ್ಕೆ

ಚಾಮರಾಜನಗರ: ರಾಜ್ಯ ಕಿವಿ, ಮೂಗು, ಗಂಟಲು ತಜ್ಞ ವೈದ್ಯರ ಸಂಘದ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಬಾಬು ಸೋಶಿಯಲ್ ವೆಲ್ ಫೇರ್ ಅಂಡ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಎ.ಆರ್.ಬಾಬು ತಿಳಿಸಿದರು.

ಅ.೧೭, ೧೮, ೧೯ ರಂದು ಮಣಿಪಾಲದಲ್ಲಿ ನಡೆದ ದಕ್ಷಿಣ ಭಾರತದ (ಕೇರಳ, ತ.ನಾಡು, ಕರ್ನಾಟಕ, ಆಂಧ್ರ ಪ್ರದೇಶ) ಕಿವಿ, ಮೂಗು, ಗಂಟಲು ತಜ್ಞರ ಸಮಾವೇಶದ ನಂತರ ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ರಾಜ್ಯದ ಎಲ್ಲ ಹಿರಿಯ ಹಾಗೂ ಕಿರಿಯ ವೈದ್ಯರೆಲ್ಲರೂ ಸರ್ವಾನುಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಂಘದ ರಾಜ್ಯಾಧ್ಯಕ್ಷ ಸ್ಥಾನದ ಸೇವಾವಧಿ ಒಂದು ವರ್ಷವಾಗಿದ್ದು, ೨೦೨೩-೨೪ನೇ ಸಾಲಿಗೆ ಆಯ್ಕೆ ಮಾಡಿದ್ದಾರೆ. ರಾಜ್ಯದಲ್ಲಿ ೧೫೦೦ ಇಎನ್‌ಟಿ ತಜ್ಞರಿದ್ದಾರೆ. ಇಎನ್‌ಟಿ ಕ್ಷೇತ್ರದ ಸಂಶೋಧನೆಗಳ ಬಗ್ಗೆ ಕಿರಿಯ ವೈದ್ಯರಿಗೆ ಮತ್ತು ಸ್ನಾತಕೋತ್ತರ ಪದವೀಧರರಿಗೆ ತರಬೇತಿ ನೀಡಲಾಗುವುದು ಎಂದರು.
ಪ್ರತಿ ಜಿಲ್ಲೆಯಲ್ಲೂ ಇಎನ್‌ಟಿ ತಜ್ಞ ವೈದ್ಯರ ಸಂಘಗಳನ್ನು ಬಲಪಡಿಸಲಾಗುತ್ತದೆ. ಸಂಘದ ಮೂಲಕ ಗ್ರಾಮದ ಭಾಗದಲ್ಲೂ ಕಿವಿ, ಗಂಟಲು, ಮೂಗಿನ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಇಎನ್‌ಟಿ ತಜ್ಞ ವೈದ್ಯರಾಗಿ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದೇನೆ. ೨೦೦೪ರಲ್ಲಿ ನಡೆದ ರಾಜ್ಯ ಮಟ್ಟದ, ೨೦೧೬ ರಲ್ಲಿ ನಡೆದ ರಾಷ್ಟç ಮಟ್ಟದ ಇಎನ್‌ಟಿ ವೈದ್ಯರ ಸಮ್ಮೇಳನದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ ಎಂದರು.
ಗೋಷ್ಠಿಯಲ್ಲಿ ವೈದ್ಯರಾದ ಡಾ.ಬಿ.ಪಿ.ನಟರಾಜಮೂರ್ತಿ, ಡಾ.ನಂಜಪ್ಪ, ಡಾ.ಹರೀಶ್, ತಾಲೂಕು ಔಷಧಿ ವ್ಯಾಪಾರ ಸಂಘದ ಅಧ್ಯಕ್ಷ ಪ್ರಶಾಂತ್ ಹಾಜರಿದ್ದರು.

andolanait

Recent Posts

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

3 hours ago

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

3 hours ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಅರ್ಧ ಲೀಟರ್ ನೀರಿನ ಬಾಟಲಿ ಕೊರತೆ

ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…

3 hours ago

ಓದುಗರ ಪತ್ರ: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಯಾವಾಗ?

ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…

3 hours ago

ಓದುಗರ ಪತ್ರ: ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಿ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ವಿಶಾಲ್ ಸಿಂಗ್ ಎಂಬ ಬಡರೋಗಿಗಳ ಅನ್ನದಾತ

ಪಂಜುಗಂಗೊಳ್ಳಿ  ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…

3 hours ago