ಬೆಂಗಳೂರು– ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.
ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಗೆ 2 ಕೋಟಿ ರೂ.ಗಳನ್ನು ಮಹಾಮಂಡಲದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.
ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾಮಂಡಲದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್‍ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು.
ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…