ಜಿಲ್ಲೆಗಳು

ರಾಜ್ಯ ಸಹಕಾರ ಮಹಾಮಂಡಲಕ್ಕೆ 2 ಕೋಟಿ ರೂ ಚೆಕ್ ಹಸ್ತಾಂತರ

ಬೆಂಗಳೂರು– ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, ಸಚಿವರಾದ ಮೇಲೆ ಆ ಕ್ಷೇತ್ರವನ್ನು ಕಡೆಗಣಿಸಬಾರದು. ಎಲ್ಲರೂ ಒಟ್ಟಾಗಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ನಮಿಸಬೇಕು. ರಾಜಕೀಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಹಕಾರ ಕ್ಷೇತ್ರವನ್ನು ಉಳಿಸುವ ಕೆಲಸ ಮಾಡಬೇಕು. ಕೆಲವು ಸಹಕಾರ ಸಂಸ್ಥೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುತ್ತಿರುವುದು ಸ್ವಾಗತಾರ್ಹ ಎಂದರು.
ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ಶಿಕ್ಷಣ ನಿಗೆ 2 ಕೋಟಿ ರೂ.ಗಳನ್ನು ಮಹಾಮಂಡಲದಿಂದ ನೀಡಲಾಗಿದೆ. 50 ಕಡೆಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕೃಷಿ ಉತ್ಪನ್ನ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ಜನರಿಕ್ ಔಷಧದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.
ಮಹಾಮಂಡಳದ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಯೋಜನೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಕಮೀಷನ್ ಆಧಾರದ ಮೇಲೆ ಇತರೆ ಸಂಸ್ಥೆಗಳೊಂದಿಗೆ ವ್ಯವಹರಿಸುವುದು, ಇ-ಮಾರ್ಕೆಟ್ ಘಟಕಗಳನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಮಹಾಮಂಡಲದಲ್ಲಿ ಎ ಮತ್ತು ಬಿ ವರ್ಗದ 504 ಷೇರುದಾರರು ಇದ್ದು 9.02 ಕೋಟಿ ಷೇರು ಬಂಡವಾಳವಿದೆ. 417.42 ಲಕ್ಷದ ಗೊಬ್ಬರ ಮಾರಾಟ ಮಾಡಲಾಗಿದೆ. ಆಡಿಟ್‍ನಲ್ಲಿ ಬಿ ಗ್ರೇಡ್ ದೊರೆತಿದೆ ಎಂದು ಹೇಳಿದರು.
ಸಹಕಾರ ಮಾರಾಟ ಮಹಾಮಂಡಳದ ಉಪಾಧಕ್ಷ ಪಾಟೀಲ್ ಉಪಸ್ಥಿತರಿದ್ದರು.

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

2 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

9 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

9 hours ago