Mysore
30
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜ್ಯ ಉನ್ನತ ಶಿಕ್ಷಣ ಮಂಡಳಿ ಸದಸ್ಯರಾಗಿ ಪ್ರೊ.ಉಷಾರಾಣಿ ನೇಮಕ

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಸರ್ಕಾರವು ಐದು ವರ್ಷ ಅವಧಿಗೆ ನಾಮನಿರ್ದೇಶನ ಮಾಡಿ ಅಧಿಸೂಚನೆ ಹೊರಡಿಸಿದೆ.

ಪ್ರೊ.ಉಷಾರಾಣಿ ಅವರು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಸಂಸ್ಥೆ (ಇಎಂಆರ್‌ಸಿ)ಯ ನಿರ್ದೇಶಕರಾಗಿ, ಕಲಾ ನಿಕಾಯದ ಡೀನರಾಗಿ, ಯುಜಿಸಿ–ಯುಪಿಇ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಇವರು ಐಸಿಎಸ್‌ಎಸ್‌ಆರ್‌ ಹಿರಿಯ ಪ್ರೊಫೆಸರ್ ಫೆಲೊ ಆಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಇವರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಇನ್ನೂ ಮೈಂಡ್‌‌ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ