ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಎನ್.ಉಷಾರಾಣಿ ಅವರು ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಸರ್ಕಾರವು ಐದು ವರ್ಷ ಅವಧಿಗೆ ನಾಮನಿರ್ದೇಶನ ಮಾಡಿ ಅಧಿಸೂಚನೆ ಹೊರಡಿಸಿದೆ.
ಪ್ರೊ.ಉಷಾರಾಣಿ ಅವರು ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಸಂಸ್ಥೆ (ಇಎಂಆರ್‌ಸಿ)ಯ ನಿರ್ದೇಶಕರಾಗಿ, ಕಲಾ ನಿಕಾಯದ ಡೀನರಾಗಿ, ಯುಜಿಸಿ–ಯುಪಿಇ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಇವರು ಐಸಿಎಸ್‌ಎಸ್‌ಆರ್ ಹಿರಿಯ ಪ್ರೊಫೆಸರ್ ಫೆಲೊ ಆಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಇವರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಇನ್ನೂ ಮೈಂಡ್‌ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…