ಜಿಲ್ಲೆಗಳು

ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್ ಎಲ್.ನಾಗೇಂದ್ರ ಚಾಲನೆ…

ಮೈಸೂರು : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್‌ಸಿಎವಿಸಿ ಸಹಯೋಗದಲ್ಲಿ ಎರಡು ದಿನಗಳ ಕಾಲ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್‌ಗೆ ಸೋಮವಾರ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಪುನೀತ್ ರಾಜ್‌ಕುಮಾರ್ ಅವರ ಪ್ರೇರಣೆಯಿಂದ ಅನೇಕರು ನೇತ್ರದಾನಕ್ಕೆ ಮುಂದಾಗುತ್ತಿದ್ದಾರೆ. ಹೃದಯವಂತಿಕೆಯಿಂದ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂದರು.

ನನಗೂ ಚದುರಂಗ ಆಟ ಹೆಚ್ಚು ಇಷ್ಟ. ನಾನೂ ಆಡುತ್ತೇನೆ. ಇದು ಶಕ್ತಿಯಿಂದ ಆಡುವ ಆಟವಲ್ಲ. ಯುಕ್ತಿಯಿಂದ ಆಡುವ ಆಟ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಉತ್ತಮವಾಗಿ ಆಟವಾಡಿ ಎಂದು ಶುಭ ಹಾರೈಸಿದರು.

ನಗರ ಪಾಲಿಕೆ ಸದಸ್ಯ ಎಸ್‌ಬಿಎಂ ಮಂಜು ಮಾತನಾಡಿ, ಇಲ್ಲಿನ ಸ್ಪರ್ಧಿಗಳಿಗೆ ಕಣ್ಣು ಕಾಣದೆ ಇರಬಹುದು. ಮುಖದಲ್ಲಿ ಯಾವಾಗಲೂ ಸಂತೋಷವಿರುತ್ತದೆ. ಆದರೆ, ಕಣ್ಣು ಕಾಣುವ ನಮ್ಮ ಮುಖಗಳಲ್ಲಿ ಆ ಸಂತೋಷ ಕಾಣುವುದಿಲ್ಲ. ಈ ಸಂತೋಷ ಯಾವಾಗಲೂ ಇರಲಿ ಎಂದು ಹಾರೈಸಿದರು.

ಇದೊಂದು ಮಾನವೀಯ ಸ್ಪರ್ಧೆಯಾಗಿದೆ. ಕಣ್ಣಿದ್ದೂ ಕುರುಡಾಗಿರುವ ಅನೇಕರು ಹೊರಗೆ ಬಂದು ಇವರನ್ನು ಪ್ರೋತ್ಸಾಹಿಸಬೇಕು. ಎಂತಹ ಸಮಸ್ಯೆ ಬಂದರೂ ಕುಗ್ಗಬಾರದು. ಸಮಾಜವನ್ನು ಎದುರಿಸಬೇಕು ಎಂದರು.

ಧಾರವಾಡದ ಮನಗುಂಡಿಯ ಗುರು ಬಸವ ಮಹಾಮನೆ ಮಠದ ಬಸವಾನಂದ ಮಹಾ ಸ್ವಾಮೀಜಿ ಆರ್ಶೀವಚನ ನೀಡಿದರು. ಒಂಟಿಕೊಪ್ಪಲು ಸರ್ಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ಸಿ.ಚೆಲುವಯ್ಯ, ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್, ನಿರ್ದೇಶಕ ಗುರುರಾಜ್, ರಾಮು, ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ ಅಧ್ಯಕ್ಷೆ ಎಚ್.ಎಲ್.ಯಮುನಾ, ಮನು ಕೀರ್ತಿ, ಎ.ಆರ್.ರಮೇಶ್, ಶಶಿಧರ್ ಇತರರು ಇದ್ದರು. ಸುಮಾರು ೨೦೦ಕ್ಕೂ ಹೆಚ್ಚು ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಪೋಟೋ : ಕರ್ನಾಟಕ ರಾಜ್ಯ ಒಕ್ಕಲಿಗ ವಿಕಾಸ ವೇದಿಕೆ, ಚೆಸ್ ಅಸೋಸಿಯೆಷನ್ ಮತ್ತು ಕೆಎಸ್‌ಸಿಎವಿಸಿ ಸಹಯೋಗದಲ್ಲಿ ಪಡುವಾರಹಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಅಂಧರ ಚೆಸ್ ಚಾಂಪಿಯನ್‌ಶಿಪ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಮಾತನಾಡಿದರು.

andolana

Recent Posts

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

39 mins ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

43 mins ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

45 mins ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

48 mins ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

51 mins ago

ಮತ್ತೆ ಹುಯ್ಯುತ್ತಿರುವ ಪ್ರತಿಭಟನೆಯ ಸುರಿಮಳೆ

ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…

1 hour ago