Mysore
24
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

23ಕ್ಕೆ ರಾಜ್ಯ ಮಟ್ಟದ ರಾಣಿ ಚೆನ್ನಮ್ಮ ಜಯಂತ್ಯುತ್ಸವ

ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು.
ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಬಾರಿ ರಾಜ್ಯ ಮಟ್ಟದ ಚೆನ್ನಮ್ಮ ಜಯಂತಿ ಆಚರಿಸುತ್ತಿದೆ. ನಮ್ಮ ಒತ್ತಾಯದಿಂದ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಟಿಪ್ಪು ಸುಲ್ತಾನ್‌ರ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ದಿಟ್ಟತನದಿಂದ ಹೋರಾಡಿದ ಚೆನ್ನಮ್ಮ ಅವರ ಜಯಂತಿಯನ್ನು ಮಾತ್ರ ಕಿತ್ತೂರಿಗೆ ಸೀಮಿತ ಮಾಡಲಾಗಿತ್ತು ಎಂದರು.
ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ನಡೆಯುವ ರಾಜ್ಯಮಟ್ಟದ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲಕುಮಾರ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಚೆನ್ನಮ್ಮ ಭಾವಚಿತ್ರವನ್ನು ಶ್ರೀ ಚಾಮರಾಜೇಶ್ವರ ದೇವಾಲಯದಿಂದ ಕಲಾಮಂದಿರದ ತನಕ ಮೆರವಣಿಗೆ ಮಾಡಲಾಗುವುದು. ಕೂಡಲ ಸಂಗಮದ ಶ್ರೀ ಪಂಚಮಸಾಲಿ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ, ಮರಿಯಾಲದ ಮುರುಘರಾಜೇಂದ್ರ ಸ್ವಾಮೀಜಿ, ನಗರದ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ವಿವರಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!