ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು.
ಬ್ರಿಟಿಷರ ವಿರುದ್ದ ಹೋರಾಡಿದ್ದ ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ಕೇವಲ ಕಿತ್ತೂರಿಗೆ ಸೀಮಿತಗೊಳಿಸುವುದು ಬೇಡ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಬಾರಿ ರಾಜ್ಯ ಮಟ್ಟದ ಚೆನ್ನಮ್ಮ ಜಯಂತಿ ಆಚರಿಸುತ್ತಿದೆ. ನಮ್ಮ ಒತ್ತಾಯದಿಂದ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಟಿಪ್ಪು ಸುಲ್ತಾನ್‌ರ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲು ಕಾಂಗ್ರೆಸ್ ಮುಂದಾಗಿತ್ತು. ಆದರೆ, ದಿಟ್ಟತನದಿಂದ ಹೋರಾಡಿದ ಚೆನ್ನಮ್ಮ ಅವರ ಜಯಂತಿಯನ್ನು ಮಾತ್ರ ಕಿತ್ತೂರಿಗೆ ಸೀಮಿತ ಮಾಡಲಾಗಿತ್ತು ಎಂದರು.
ಅಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಡಾ.ರಾಜಕುಮಾರ್ ಕಲಾಮಂದಿರದಲ್ಲಿ ನಡೆಯುವ ರಾಜ್ಯಮಟ್ಟದ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲಕುಮಾರ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಚೆನ್ನಮ್ಮ ಭಾವಚಿತ್ರವನ್ನು ಶ್ರೀ ಚಾಮರಾಜೇಶ್ವರ ದೇವಾಲಯದಿಂದ ಕಲಾಮಂದಿರದ ತನಕ ಮೆರವಣಿಗೆ ಮಾಡಲಾಗುವುದು. ಕೂಡಲ ಸಂಗಮದ ಶ್ರೀ ಪಂಚಮಸಾಲಿ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ, ಮರಿಯಾಲದ ಮುರುಘರಾಜೇಂದ್ರ ಸ್ವಾಮೀಜಿ, ನಗರದ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ವಿವರಿಸಿದರು.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…