Mysore
26
few clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಅರ್ಧ ಮುಂಬೈನಗರ ರಾಜ್ಯಕ್ಕೆ ಸೇರಿಸಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಮುಂದೆ ಕದಂಬ ಸೈನ್ಯ ಪ್ರತಿಭಟನೆ

ಮಂಡ್ಯ: ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ಸಾಂಗ್ಲಿ ಪಂಡರಾಪುರ ಸೇರಿದಂತೆ ಅರ್ಧ ಮುಂಬೈ ನಗರವನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯದಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯಕ್ಕೆ ಸೇರಿಸುವ ಸಂಬಂಧ ಮಹಾರಾಷ್ಟ್ರದಲ್ಲಿ ಕನ್ನಡಿಗರು ತೀವ್ರತರವಾದ ಹೋರಾಟ ನಡೆಸುತ್ತಿದ್ದಾರೆ. ಆದ್ದರಿಂದ ಸಿಎಂ ಬಸವರಾಜ ಬೊವ್ಮಾಯಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲಿನ ಪ್ರದೇಶವನ್ನು ಕರ್ನಾಟಕಕ್ಕೆ ಸೇರಿಸಲು ಸಾಕಷ್ಟು ಆಧಾರಗಳಿವೆ. ಅದನ್ನು ಬಳಸಿಕೊಂಡು ಸರ್ವೋಚ್ಛ ನ್ಯಾಯಾಲಯ ಅರ್ಜಿ ಸಲ್ಲಿಸುವುದರ ಜತೆಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ಇದಕ್ಕೆ ವಿಪಕ್ಷೃಗಳು ಗಟ್ಟಿ ಧ್ವನಿಾಂಗಿ ನಿಲ್ಲಬೇಕು ಎಂದು ಆಗ್ರಹಿಸಿದರು.
ಸೈನ್ಯದ ಸಂಸ್ಥಾಪಕ ಬೇಕ್ರಿ ರಮೇಶ್, ಉಮ್ಮಡಹಳ್ಳಿ ನಾಗೇಶ್, ಕೆ.ಸಿ.ೋಂಗೇಶ್, ಚಿಕ್ಕವೆಂಕಟಪ್ಪ, ರಾಮು ಪ್ರತಿಭಟನೆುಂಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!