ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು.
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಗುರಿ ಹೊಂದುವ ಮೂಲಕ ಪ್ರತಿ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಬೇಕು. ಸಿವಿಲ್ ಸೇವೆ, ಸೇನೆ ಸೇರಿದಂತೆ ಇತರೆ ಹಲವು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ವಿಫುಲವಾದ ಅವಕಾಶಗಳಿವೆ. ಅಲ್ಲದೇ ವಿಶೇಷವಾದ ಮೀಸಲಾತಿ ಸಹ ಇದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ರೀತಿಯ ಪರೀಕ್ಷೆಗಳನ್ನು ಎದುರಿಸಿ ಜೀವನ ರೂಪಿಸಿಕೊಳ್ಳಬೇಕು. ಶಾಲಾ, ಕಾಲೇಜುಗಳಲ್ಲಿರುವ ಸಾಂಸ್ಕೃತಿಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕಲಿಕೆಗೆ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದೆ. ಉದ್ಯೋಗದಲ್ಲಿ ವೃತ್ತಿ ನೈಪುಣ್ಯತೆ ಮೆರೆದರೆ ಹುದ್ದೆಯ ಘನತೆ ಹೆಚ್ಚಿಸುತ್ತದೆ. ಸಮಾಜದಲ್ಲಿ ಮಹಿಳೆಯರು ಸಬಲರಾಗಲು ಶಿಕ್ಷಣ ಬಹಳ ಮುಖ್ಯ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸೇವೆ ದೊರಕಬೇಕು. ಮಹಿಳೆಯರ ಸೇವೆ ದೇಶಕ್ಕೆ ಅವಶ್ಯಕ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಕಾಲೇಜಿಗೆ ಸ್ವಾಗತ ಕೋರಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಬಿ.ಎಲ್.ತ್ರಿಪುರಾಂಕ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜಿ.ಸಿದ್ದರಾಜು, ಉಪನ್ಯಾಸಕರಾದ ರೇವಣಾಂಬ, ಡಾ.ಎ.ಆರ್.ಸುಷ್ಮಾ ಸೇರಿದಂತೆ ಇತರರಿದ್ದರು.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…