ಜಿಲ್ಲೆಗಳು

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು :ಡಿವೈಎಸ್‌ಪಿ ಟಿ.ಪಿ.ಶಿವಕುಮಾರ್ ಕಿವಿಮಾತು

ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು.
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು. ವಿದ್ಯಾರ್ಥಿಗಳಿಗೆ ಗುರಿ ಹೊಂದುವ ಮೂಲಕ ಪ್ರತಿ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಬೇಕು. ಸಿವಿಲ್ ಸೇವೆ, ಸೇನೆ ಸೇರಿದಂತೆ ಇತರೆ ಹಲವು ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳಿಗೆ ವಿಫುಲವಾದ ಅವಕಾಶಗಳಿವೆ. ಅಲ್ಲದೇ ವಿಶೇಷವಾದ ಮೀಸಲಾತಿ ಸಹ ಇದೆ. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ರೀತಿಯ ಪರೀಕ್ಷೆಗಳನ್ನು ಎದುರಿಸಿ ಜೀವನ ರೂಪಿಸಿಕೊಳ್ಳಬೇಕು. ಶಾಲಾ, ಕಾಲೇಜುಗಳಲ್ಲಿರುವ ಸಾಂಸ್ಕೃತಿಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕಲಿಕೆಗೆ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದೆ. ಉದ್ಯೋಗದಲ್ಲಿ ವೃತ್ತಿ ನೈಪುಣ್ಯತೆ ಮೆರೆದರೆ ಹುದ್ದೆಯ ಘನತೆ ಹೆಚ್ಚಿಸುತ್ತದೆ. ಸಮಾಜದಲ್ಲಿ ಮಹಿಳೆಯರು ಸಬಲರಾಗಲು ಶಿಕ್ಷಣ ಬಹಳ ಮುಖ್ಯ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸೇವೆ ದೊರಕಬೇಕು. ಮಹಿಳೆಯರ ಸೇವೆ ದೇಶಕ್ಕೆ ಅವಶ್ಯಕ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಕಾಲೇಜಿಗೆ ಸ್ವಾಗತ ಕೋರಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಬಿ.ಎಲ್.ತ್ರಿಪುರಾಂಕ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜಿ.ಸಿದ್ದರಾಜು, ಉಪನ್ಯಾಸಕರಾದ ರೇವಣಾಂಬ, ಡಾ.ಎ.ಆರ್.ಸುಷ್ಮಾ ಸೇರಿದಂತೆ ಇತರರಿದ್ದರು.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

2 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

2 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

8 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

8 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

8 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

8 hours ago