ಹನೂರು : ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಗ್ಗೆ ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
ತಾಲೂಕಿನ ಬೈಲೂರು, ಹುತ್ತೂರು, ಒಡೆಯರಪಾಳ್ಯ,ಪಿ ಜಿ ಪಾಳ್ಯ ಚಿಕ್ಕ ಮಾಲಾಪುರ, ಚನ್ನಲಿಂಗನಹಳ್ಳಿ, ಕಂಡಯ್ಯನ ಪಾಳ್ಯ ಸೇರಿದಂತೆ ಲೋಕನಹಳ್ಳಿ ಗ್ರಾಮದಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಳ್ಳೇಗಾಲದ ವಿವಿಧ ಖಾಸಗಿ ಶಾಲೆಗೆ ಪ್ರತಿ ದಿನ ತೆರಳುತ್ತಿದ್ದಾರೆ.
ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸ್ ಪೇದೆ, ಬಂಗಾರನಾಯ್ಕ ಸ್ಥಳಕ್ಕಾಗಿಮಿಸಿ ಘಟನೆಯ ಬಗ್ಗೆ ವೃತ ನಿರೀಕ್ಷಕ ಸಂತೋಷ್ ಕಶ್ಯಪ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ವೃತ್ತ ನಿರೀಕ್ಷಕ ಸಂತೋಷ ಕಶ್ಯಪ್ ರವರು ಡಿಪೋ ವ್ಯವಸ್ಥಾಪಕ ಮುತ್ತುರಾಜ್ ರವರಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ. ಈ ವೇಳೆ ಡಿಪೋ ವ್ಯವಸ್ಥಾಪಕ ಮುತ್ತುರಾಜ್ ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಜೊತೆ ಚರ್ಚಿಸಿ ನಾಳೆಯಿಂದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟು ಶಾಲಾ-ಕಾಲೇಜಿಗೆ ತೆರಳಿದ್ದಾರೆ. ಈ ವೇಳೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಸಹ ಡಿಪೋ ವ್ಯವಸ್ಥಾಪಕರಿಗೆ ನಾಳೆಯಿಂದ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸುತ್ತೇವೆ, ನಾಳೆಯೂ ಸಮಸ್ಯೆ ಬಗೆಹರಿಯದಿದ್ದರೆ ರಸ್ತೆ ತಡೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…