ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಾಂಶುಪಾಲರಾದ ಡಾ.ಡಿ ರವಿ ಅವರು ಮಾತನಾಡುತ್ತಿರುವುದು
ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು.
ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು. ಆದ ಕಾರಣ ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿತ್ತು.
ಆತಂಕ ದೂರ ಮಾಡುವ ಸಲುವಾಗಿ ಸಭೆ ಕರೆಯಲಾಗಿತ್ತು.
ಕುಸಿದ ಪಾರಂಪರಿಕ ಕಟ್ಟಡದಲ್ಲಿ ಪ್ರಯೋಗಶಾಲೆ ಮತ್ತು ಕೆಲವು ತರಗತಿಗಳು ನಡೆಯುತ್ತಿದ್ದವು. ಸದರಿ ತರಗತಿಗಳನ್ನು ಪಕ್ಕದಲ್ಲೇ ಇರುವ ಹೊಸ ಕಟ್ಟಡದಲ್ಲಿ ನಡೆಸಲಾಗುತ್ತದೆ. ತರಗತಿಗಳು ಯಾವ ತೊಂದರೆಯೂ ಇಲ್ಲದೆ ನಡಯಲಿವೆ ಎಂದು ಪ್ರಾಂಶುಪಾಲರಾದ ಡಾ.ಡಿ.ರವಿ ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಲೋಕೋಪಯೋಗಿ ಇಲಾಖೆಯ ಇಂಜಿನಿಯರುಗಳ ತಂಡ ಕಾಲೇಜಿನ ಪಾರಂಪರಿಕ ಕಟ್ಟಡವನ್ನು ಪರಿಶೀಲನೆ ನಡೆಸಿದ್ದು ಇನ್ನು ಕೆಲವೇ ದಿನಗಳಲ್ಲಿ ವರದಿ ನೀಡಲಿದ್ದಾರೆ. ಆ ನಂತರ ಮುಂದಿನ ಕ್ರಮವನ್ನು ಇಲಾಖೆ ತೆಗೆದುಕೊಳ್ಳಲಿದೆ ಎಂದ ಅವರು
ಗಾಳಿಸುದ್ದಿ ನಂಬದಿರುವಂತೆ ಹಾಗು ಕುತೂಹಲಕ್ಕೂ ಕುಸಿದು ಬಿದ್ದಿರುವ ಕಟ್ಟಡದ ಬಳಿ ಹೋಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಧ್ಯಾಪಕರು, ಕಛೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…