Mysore
20
clear sky

Social Media

ಭಾನುವಾರ, 21 ಡಿಸೆಂಬರ್ 2025
Light
Dark

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ : ಶಾಸಕ ಆರ್ ನರೇಂದ್ರ

ಹನೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆ ಆಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು

ಪಟ್ಟಣದ ಕ್ರಿಸ್ತರಾಜ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣ ಇಲಾಖೆ ಕಚೇರಿ ಹನೂರು ಇವರ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು

ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯತೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡಬೇಕು. ಜೊತೆಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ಅನುಕೂಲವಾಗಲಿದೆ. ನಮ್ಮ ಶೈಕ್ಷಣಿಕ ವಲಯದ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿ ಪಡೆದಿರುವುದು ಸಂತೋಷದ ವಿಚಾರ. ಇದಲ್ಲದೆ ನೆರೆಯ ದೇಶವಾದ ನೇಪಾಳದಲ್ಲಿ ನಡೆದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ನಮ್ಮ ದೇಶ ಹಾಗೂ ನಮ್ಮ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಇದಲ್ಲದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಳೆದ 5 ವರ್ಷಗಳಿಂದ ಪ್ರಥಮ ಸ್ಥಾನ ಪಡೆದಿದೆ . ಕಳೆದ ಸಾಲಿನಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ತರುವ ಮೂಲಕ ಉತ್ತಮ ಸ್ಥಾನ ತಂದಿದ್ದಾರೆ.

ಇದೇ ಸಂದರ್ಭದಲ್ಲಿ ಕ್ರಿಸ್ತರಾಜ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೋಷನ್ ಬಾಬು ಮಾತನಾಡಿದರು .

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಮುನಿಯನಾಯಕ್,ಪದವೀಧರರ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್,ಪ್ರಾರ್ಥಮಿಕ ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು,ಬಿಆರ್ ಸಿ ದಿನೇಶ್ ,ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ,ಶಿಕ್ಷಣ ಸಂಯೋಜಕರಾದ ಕಿರಣ್ ಕಂದವೇಲು ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಹಾಗೂ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!