ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು.
ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಪ್ರತಿದಿನ ಐನೂರಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಅಪಘಾತದಿಂದ ಮೃತಪಡುತ್ತಿರುವುದು ನೋವಿನಸಂಗತಿ.ಶಾಲಾ ವಿದ್ಯಾರ್ಥಿಗಳು 18ವರ್ಷ ತುಂಬುವ ವರೆಗೂ ವಾಹನ ಚಾಲನೆ ಮಾಡಬಾರದು ಇದು ಅಪರಾಧ. ವಾಹನ ಚಾಲಕರು ಪ್ರತಿಯೊಬ್ಬರು ಡ್ರೈವಿಂಗ್ ಲೈಸನ್ಸ್, ಇನ್ಸುರೆನ್ಸ್ ,ಹೆಲ್ಮೆಟ್ ಸೇರಿದಂತೆ ಸರ್ಕಾರ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹ ದ ಬಗ್ಗೆ ತಮ್ಮ ನೆರೆಹೊರೆಯವರಿಗೆ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಒಂದು ನಿಗದಿತ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಅದನ್ನು ಹೊರತುಪಡಿಸಿ ಸಮಾಜಘಾತುಕ ಕೆಲಸಗಳಲ್ಲಿ ಭಾಗಿಯಾಗಬಾರದು ಇದರಿಂದ ತಮ್ಮ ಜೀವನವೇ ಕಷ್ಟದ ಬದುಕಿನಲ್ಲಿ ಸಿಲುಕಿಕೊಳ್ಳಲಿದೆ. ಇದರಿಂದ ಪೋಷಕರಿಗೆ ಸಹ ಅತೀವ ನೋವು ಉಂಟಾಗುತ್ತದೆ . ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಓದಿಗಷ್ಟೇ ಮಹತ್ವ ನೀಡಿ ಉನ್ನತ ಸ್ಥಾನಮಾನಗಳನ್ನು ಪಡೆಯುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆ ರಾಜ್ಯಾದ್ಯಂತ 112 ಸೇವೆ ಜಾರಿಗೆ ತಂದಿದ್ದು ,ತುರ್ತು ಸಂದರ್ಭಗಳಲ್ಲಿ, ಗಲಾಟೆ, ಅಪಘಾತ ಸೇರಿದಂತೆ ಸಮಾಜದ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಿ ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು.ಪೊಲೀಸ್ ಇಲಾಖೆ ಸದಾ 24 ಗಂಟೆಯೂ ನಿಮ್ಮ ಜೊತೆಯಲ್ಲಿರಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವೇಕಾನಂದ ಶಾಲೆ ಪ್ರಾಂಶುಪಾಲ ಮಧುಸೂದನ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…