ಮಡಿಕೇರಿ: ಪೋಷಕರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ.
ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕರೆ ಆಸ್ತಿಯನ್ನು ಹೊಂದಿದ್ದರು. ಅವರಿಂದ ಅವರ ಎರಡನೇ ಮಗಳಾದ ಬಿ.ಎಸ್ .ಜಯಲಕ್ಷ್ಮೀ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆಯನ್ನು ಮಾಡಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಪೋಷಕರ ಯೋಗಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದ್ದರು. ಇದರಿಂದ ನೊಂದ ಪೋಷಕರು, ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅವರಿಗೆ ಅರ್ಜಿ ಸಲ್ಲಿಸಿ ದಾನಪತ್ರ ರದ್ದುಗೊಳಿಸಿ ಆಸ್ತಿಯನ್ನು ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದರು. ಆ ನಿಟ್ಟಿನಲ್ಲಿ ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಅವರು ಅರ್ಜಿಯನ್ನು ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಡಾ.ಯತೀಶ್ ಉಲ್ಲಾಳ್, ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ ಅಡಿ ದಾನಪತ್ರ ರದ್ದುಗೊಳಿಸಿ ಅಸ್ತಿಯನ್ನು ಬಿ.ಎಸ್.ಜಾನಕಿ ಅವರ ಹೆಸರಿಗೆ ವರ್ಗಾಯಿಸುವಂತೆ ಆದೇಶ ನೀಡಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಜಮ್ಮುವಿನಲ್ಲಿ ಅವಳಿ ಸ್ಛೋಟ;7 ಮಂದಿಗೆ ಗಾಯ
Next Article ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ