ಸುಪ್ರೀಂಕೋರ್ಟ್ ನಲ್ಲಿ ದಾವೆ, ಮುಂದಿನ ಜೂಲೈ ಒಳಗೆ ಸ್ವಾಯತ್ತ ರಾಜ್ಯ ಎಂದ ಸ್ವಾಮಿ
ಮಡಿಕೇರಿ: ಪ್ರತ್ಯೇಕ ಕೊಡಗು ರಾಜ್ಯದ ಬೇಡಿಕೆಗೆ ಮಾಜಿ ಕೇಂದ್ರ ಸಚಿವ ಸುಬ್ರಮಣ್ಯ ಸ್ವಾಮಿ ಬೆಂಬಲ ಘೋಷಿಸಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ ಅಥವಾ ಜುಲೈ ಅಂತ್ಯದೊಳಗೆ ಕೊಡವ ಲ್ಯಾಂಡ್ ಬೇಡಿಕೆಗೆ ನ್ಯಾಯಾಲಯದಿಂದ ಸ್ಪಂದನೆ ದೊರಕುವಂತೆ ಮಾಡುವುದಾಗಿ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಶನಿವಾರ ಕೊಡವ ನ್ಯಾಷನಲ್ ಕೌನ್ಸಿಲ್(ಸಿಎನ್‌ಸಿ) ಆಯೋಜಿಸಿದ್ದ 32ನೇ ಕೊಡವ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಕೊಡವರಿಗೆ ಸ್ವಾಯತ್ತ ನಾಡು ಕೇಳಲು ಸಂವಿಧಾನಾತ್ಮಕವಾಗಿ ಎಲ್ಲಾ ಹಕ್ಕು ಇದೆ. ಸಿಎನ್‌ಸಿಗೆ ಕಾನೂನು ಹೋರಾಟದ ಮೂಲಕ ಭೌಗೋಳಿಕ-ರಾಜಕೀಯ ಸ್ವಾಯತ್ತೆ ಗುರಿ ಸಾಧಿಸಬೇಕು ಎಂದರು.
” ನಿಮಗೆ(ಕೊಡಗು/ಕೊಡವರಿಗೆ) ದೊಡ್ಡ ಅನ್ಯಾಯವಾಗಿದೆ. ಆದರೆ ಹೋರಾಟವನ್ನು ಮುಂದುವರಿಸಿ ” ಎಂದ ಸ್ವಾಮಿ, ಕೊಡಗಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಪಡೆಯಲು ಶೀಘ್ರವೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು.
ಉತ್ತರಾಖಂಡ್, ತೆಲಂಗಾಣ, ಹರಿಯಾಣ, ಹಿಮಾಚಲ ಪ್ರದೇಶ ಸುದೀರ್ಘ ಹೋರಾಟದ ನಂತರ ಪ್ರತ್ಯೇಕ ರಾಜ್ಯಗಳಾಗಿವೆ. ಕೊಡಗು ಸ್ವಾಯತ್ತ ನಾಡು ಏಕೆ ಆಗಬಾರದು” ಎಂದು ಅವರು ಪ್ರಶ್ನಿಸಿದರು. ಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆಯಾಗಲಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ಮೋದಿ ಆಡಳಿತದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಮೋದಿಯನ್ನು ವಿರೋಧಿಸುತ್ತಿಲ್ಲ. ಆದರೆ ಚೀನಾವನ್ನು ಓಲೈಸುವ ಅವರ ನೀತಿಯನ್ನು ನಾನು ವಿರೋಧಿಸುತ್ತೇನೆ. ಅವರು ಚೀನೀಯರಿಗೆ ನಮ್ಮ ಪ್ರದೇಶವನ್ನು ಆಕ್ರಮಿಸಲು ಬಿಡಬಾರದು. ಭಾರತ ಅವರ ವಿರುದ್ಧ ಹೋರಾಡಬೇಕು. ಈಗಿನ ಸರ್ಕಾರದ ಕೆಲವು ತಪ್ಪು ಆರ್ಥಿಕ ನೀತಿಗಳನ್ನೂ ನಾನು ವಿರೋಧಿಸುತ್ತೇನೆ. ಬಿಜೆಪಿಯಲ್ಲಿ ನನ್ನನ್ನು ಬಿಟ್ಟು ಬೇರೆ ಯಾರಿಗೂ ತಪ್ಪು ನೀತಿಗಳನ್ನು ಪ್ರಶ್ನಿಸುವ ತಾಕತ್ತು ಇಲ್ಲ. ನಾನು ಹಲವು ಬಾರಿ ಮನವಿ ಮಾಡಿದರೂ ರಾಮಸೇತುವನ್ನು ಪಾರಂಪರಿಕ ತಾಣ ಎಂದು ಘೋಷಿಸಲು ಪ್ರಧಾನಿ ವಿಫಲರಾಗಿದ್ದಾರೆ ಎಂದರು.
ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಿಗ್ಗೆ 11…
ಬೆಂಗಳೂರು: ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರಿಂದು ಇತ್ತೀಚೆಗೆ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ…
ಮುಂಬೈ: ಬಾಲಿವುಡ್‌ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳುಗಳಿಂದ…
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…